ಶಿವಮೊಗ್ಗ | ಲೋಕಾಯುಕ್ತ ಬಲೆಗೆ : ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ

Date:

ಶಿವಮೊಗ್ಗ, ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದೂರುದಾರ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಟ್ರ್ಯಾಪ್​ ಮಾಡಿ ಅಧಿಕಾರಿಯನ್ನು ಬಲೆಗೆ ಬೀಳಿಸಿದ್ದಾರೆ.

ರಾಮಪುರ ಗ್ರಾಮದ ವಿನೋದ್ ಬಿ. ಎಂಬುವವರು ಅಧಿಕಾರಿಯು ಲಂಚ ಕೇಳುತ್ತಿರುವ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ದೂರಿನಲ್ಲಿ, ಅವರ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ ಸೈಟಿನಲ್ಲಿ ನಿರ್ಮಿಸಿರುವ 23×38 ಅಡಿ ಮನೆಯ ಇ-ಸ್ವತ್ತು ಮಾಡಿಸಲು ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಕಾರ್ಯದರ್ಶಿ ಕುಮಾರ್​ ನಾಯ್ಕ್​ ಅವರನ್ನು ಹಲವು ಬಾರಿ ಸಂಪರ್ಕಿಸಿದಾಗ, ಅವರು ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಕೊನೆಯಲ್ಲಿ ಕುಮಾರ್​ ನಾಯ್ಕ್​ ಈ ವಿಚಾರದಲ್ಲಿ ₹3,000 ಲಂಚ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಹಣ ಕೇಳಿದ್ದರ ವಾಯ್ಸ್ ರೆಕಾರ್ಡ್ ನ್ನು ಲೋಕಾಯುಕ್ತ ಅಧಿಕಾರಿಗಳಿಗೆ ನೀಡಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ದೂರನ್ನು ಆಧರಿಸಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ಕಲಂ 7(3) ಕೇಸ್ ದಾಖಲಿಸಿದ್ದ ಅಧಿಕಾರಿಗಳು ಆರೋಪಿತ ಅಧಿಕಾರಿಯನ್ನು ಟ್ರ್ಯಾಪ್ ಮಾಡಿದೆ. ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೊಠಡಿಯಲ್ಲಿ ಗುರುವಾರ ಕುಮಾರ್​ ನಾಯ್ಕ್​ ₹3,000 ಲಂಚದ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪಿಐ ಗುರುರಾಜ್ ಎನ್. ಮೈಲಾರ ತನಿಖೆ ನಡೆಸ್ತುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರುದ್ರೇಶ್ ಕೆ.ಪಿ., ಹಾಗೂ ಪೊಲೀಸ್ ಸಿಬ್ಬಂದಿಗಳಾದ ಯೋಗೇಶ್ ಟೀಕಪ್ಪ , ಸುರೇಂದ್ರ ಮಂಜುನಾಥ್ ., ಬಿ.ಟಿ. ಚನ್ನೇಶ್ , ದೇವರಾಜ್ ಸಿ.ಪಿ.ಸಿ., ಪ್ರಕಾಶ್ ಬಾರಿದಮರ ., ಅರುಣ್ ಕುಮಾರ್ , ಅಂಜಲಿ ., ಚಂದ್ರಿಬಾಯಿ , ಗೋಪಿ, ಪ್ರದೀಪ್ ., ಜಯಂತ್ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...