ಶಿವಮೊಗ್ಗ | ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಡಿಎಚ್‌ಒ‌ ಕಚೇರಿ, ಉಗ್ರಾಣಕ್ಕೆ ಲೋಕಾಯುಕ್ತ ಭೇಟಿ; ತಪಾಸಣೆ

Date:

ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಡಿಎಚ್‌ಒ‌ ಕಚೇರಿ ಹಾಗೂ ಉಗ್ರಾಣಕ್ಕೆ ಲೋಕಾಯುಕ್ತ ಎಸ್‌ಪಿ ಮಂಜುನಾಥ್ ಚೌಧರಿ ಭೇಟಿ ನೀಡಿದ್ದು, ತಪಾಸಣೆ ನಡೆಸುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯ ಔಷಧ ಉಪ ಉಗ್ರಾಣ, ಮುಖ್ಯ ಉಗ್ರಾಣ ಮತ್ತು ಡಿಎಚ್‌ಒ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಬಳ್ಳಾರಿಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ 12 ಮಂದಿ ಬಾಣಂತಿಯರು ಮರಣ ಹೊಂದಿದ ಬೆನ್ನಲ್ಲೇ ಸರ್ಕಾರದ ಆದೇಶದ‌ ಮೇರೆಗೆ ಗ್ಲುಕೋಸ್‌ ರದ್ದುಗೊಳಿಸಿದೆ. ರದ್ದು ಆದೇಶ ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂಬ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿಯವರ ತಂಡ ಖುದ್ಧು ಮೂರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದೇಶ ಬಂದ ಹಿನ್ನಲೆಯಲ್ಲಿ ಮೆಗ್ಗಾನಲ್ಲೂ ಔಷಧಗಳನ್ನು ಬಳಸದೆ ತೆಗೆದಿಡಲಾಗಿದೆ. ₹1,10,000 ಮೌಲ್ಯದ‌ ರಿಂಗಲ್ ಲ್ಯಾಕ್ಟೆಡ್ ಫ್ಲೂಯಿಡ್‌ ತಯಾರಿಸಲಾಗಿತ್ತು. ಅದರಲ್ಲಿ ಸರ್ಕಾರದ ಆದೇಶ ಬಂದ ನಂತರ ₹48,000 ಫ್ಲೂಯಿಡ್‌ಗಳನ್ನು ಬಳಸದೆ ತೆಗೆದಿಡಲಾಗಿದೆ ಎಂಬ ಸತ್ಯಾಂಶ ಲೋಕಾಯುಕ್ತ ತಪಾಸಣೆಯಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹದಡಿ ರಸ್ತೆ ದುರಸ್ತಿಗೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಅದೂ ಅಲ್ಲದೆ ವೆಸ್ಟ್ ಬೆಂಗಾಲ್‌ನಿಂದ ಸರಬರಾಜಾಗುವ ಮೆಡಿಸಿನ್‌ಗಳೂ ಕೂಡಾ ಬಳಕೆ ಮಾಡದಂತೆ ಲೋಕಾಯುಕ್ತ ಈ ವೇಳೆ ಮೆಗ್ಗಾನ್‌ಗೆ‌ ಸೂಚಿಸಿರುವುದಾಗಿ ತಿಳಿದುಬಂದಿದೆ.

ತಪಾಸಣೆ ವೇಳೆ ಲೋಕಾಯುಕ್ತ ಡಿವೈಎಸ್‌ಪಿ ಮೃತ್ಯುಂಜಯ, ಇನ್‌ಸ್ಪೆಕ್ಟರ್ ವೀರಬಸಪ್ಪ ಕುಸ್ಲಾಪುರ, ಹೆಡ್ ಕಾನ್‌ಸ್ಟೆಬಲ್‌ ಸುರೇಂದ್ರ, ಮಂಜುನಾಥ್, ಪ್ರಶಾಂತ್, ಪ್ರದೀಪ್, ಗಂಗಾಧರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...