ಶಿವಮೊಗ್ಗ | ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ

Date:

ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಸೊರಬ ತಾಲೂಕಿನ ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು.

ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ತಮ್ಮ ಆಪ್ತ ಸಹಾಯಕನನ್ನು ಆಸ್ಪತ್ರೆಗೆ ಕಳುಹಿಸಿ ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...