ಶಿವಮೊಗ್ಗ | ಸಂಸದರ ಬದಲಾವಣೆಯಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಮಧುಬಂಗಾರಪ್ಪ 

Date:

ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಿಗ್ಗಾ ಗ್ರಾಮದಲ್ಲಿ ಬುಧವಾರ (ಏ.10) ಆಯೋಜಿಸಿದ್ದ ಸಾರ್ವಜನಿಕ ಬಹಿರಂಗ ಸಭೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯ ಬಿಜೆಪಿ ಸಂಸದರು ಆಯ್ಕೆಗೊಂಡು 10 ವರ್ಷ ಕಳೆದಿದೆ. ಆದರೆ, ಮುಳುಗಡೆ ಸಂತ್ರಸ್ತರು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಹಕ್ಕು ಪತ್ರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದ ಹಂತದಲ್ಲಿ ಬಗೆಹರಿಸಬೇಕಿದ್ದ ಸಮಸ್ಯೆಗಳು ಜಿಲ್ಲೆಗೆ ಕಪ್ಪು ಚುಕ್ಕೆಯಾಗಿ ಉಳಿದುಕೊಂಡಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಳ್ಳು ಭಾಷಣ ಮಾಡಿಕೊಂಡು ಜನ ಸಾಮಾನ್ಯರಿಗೆ ನಾಮ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರು ಉಸಿರಾಡುತ್ತಿದ್ದಾರೆ. ಇದಕ್ಕೆ ಮಸಿ ಬಳಿಯಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಇದಕ್ಕೆ ಜನರು ಆಸ್ಪದ ಕೊಡಕೂಡದು ಎಂದರು.

ಕೇಂದ್ರದ ಹಂತದಲ್ಲಿ ರೈತರ ಸಮಸ್ಯೆಗಳಿಗೆ ಗೀತಕ್ಕ ನ್ಯಾಯ ಒದಗಿಸಿದರೆ, ರಾಜ್ಯದಲ್ಲಿ ರೈತರ ಪರ ನಾನು ಹೋರಾಡುತ್ತೇನೆ‌. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಒಟ್ಟಾಗಿ ಶ್ರಮಿಸುತ್ತೇವೆ. ಆದ್ದರಿಂದ, ಮತದಾರರು ಗೀತಕ್ಕಗೆ ಮತ ನೀಡಿ ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ,  ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರಳಾಗಿ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಳಿಗೆ ಶಕ್ತಿ ತುಂಬಿದ್ದಾರೆ ಎಂದರು.

ಸೊರಬ ತಾಲೂಕು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ದೇವರ ರೀತಿ, ಕಾಣುತ್ತಿದ್ದ ನೆಲ. ಅದೇ ಬಂಗಾರಪ್ಪ ಅವರ ಮಗಳು ನಾನು. ಅವರ ಹಾದಿಯಲ್ಲಿ ಸಾಗಲು ನನಗೂ ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಅಯೋಧ್ಯೆಯ ರಾಮ ಮಂದಿರವನ್ನು ಚುನಾವಣೆಯ ದುರುದ್ದೇಶದಿಂದ ಉದ್ಘಾಟಿಸಲಾಗಿದೆ. ಇದಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು, ದೇವರು- ಧರ್ಮವೆಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದೇ ನೆಲದಲ್ಲಿ ಜನಿಸಿದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಆರಾಧನ ಯೋಜನೆಯಿಂದ 21 ಸಾವಿರ ಮಂದಿರಗಳನ್ನು ಕಟ್ಟಿಸಿದ್ದರು. ಆದರೆ, ಇವರನ್ನು ಮರೆತಿದ್ದೇವೆ ಎಂದರು.

ಬಜೆಪಿ ಆಡಳಿತದಿಂದ ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನ ಆಗಿಲ್ಲ. ಇಲ್ಲಿಯವರೆಗೆ ಬಡವರಿಗಾಗಿ ಒಂದು ಗುಡಿಸಲನ್ನೂ ಕೂಡ ನಿರ್ಮಾಣ ಮಾಡಿಲ್ಲ ಎಂದು ದೂರಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದ್ವೇಶಿಸುತ್ತಲೇ ಬಿಜೆಪಿ ಬರುತ್ತಿದೆ‌ ಎಂದರು.

ನಟ ಶಿವರಾಜಕುಮಾರ್, ಕಾಂಗ್ರೆಸ್ ಮುಖಂಡರಾದ ವೈ.ಎಚ್.ನಾಗರಾಜ್,  ಎಚ್. ಗಣಪತಿ, ಕೆಪಿಸಿಸಿ ಸದಸ್ಯ ರುದ್ರೇಗೌಡ್ರು, ಕೆ.ಇ.ಗೌಡ್ರು, ಪ್ರಭಾಕರ್, ಪ್ರವೀಣ್ ಶಾಂತಕೇರಿ, ಸುರೇಶ್ ಬಿಳವಾಣಿ, ನಾಗರಾಜ್, ಎಂ.ಡಿ.ಶೇಖರ್, ಜಯಶೀಲಪ್ಪ, ಜೆ.ಪ್ರಕಾಶ್, ಸುಜಾತ, ಜ್ಯೋತಿ ನಾರಾಯಣಪ್ಪ, ಜಗದೀಶ್ ಕುಗ್ವೆ, ಚಂದ್ರ ಶೇಖರ್ ಇಂಡುವಳ್ಳಿ, ಫೈಯಾಜ್, ವೇದ ಮೂರ್ತಿ, ಶಿವಕುಮಾರ್ ಸೇರಿ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...