ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!

Date:

ಮನರೇಗಾ ಯೋಜನೆಯ ಹಣವನ್ನು ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ದುರುಪಯೋಗ ಪಡಿಸಿದ್ದು ಸಾಬೀತಾಗಿದ್ದರೂ, ಸಿಬ್ಬಂದಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಪಂಚಾಯತ್ ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರುಳಿ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಆಗಿರುವ ಗುರುನಾಥ ಎಂಬ ಸಿಬ್ಬಂದಿ ಮನರೇಗಾ ಹಣ ದುರುಪಯೋಗಪಡಿಸಿರುವ ಬಗ್ಗೆ ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರರಾದ ಮಂಜುನಾಥ್ ಎಂಬುವವರು ದೂರು ಈ ಹಿಂದೆ ನೀಡಿದ್ದರು.

shimoga zilla panchayath

ಈ ದೂರಿನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಗುರುನಾಥ್ ವೈಯಕ್ತಿಕ ಫಲಾನುಭವಿಗಳಿಂದ ಹಣವನ್ನು ಪಡೆದು ಬೇರೆ ಬೇರೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ಹಾಗೂ ಆತನ ಪತ್ನಿ ಹೇಮಾವತಿಯವರ ಹೆಸರಿಗೆ ಎನ್‌ಎಂಆರ್ ಹಣ ಹಾಕಿ ಹಣ ದುರುಪಯೋಗ ಪಡಿಸಿರುವುದಾಗಿ ಉಲ್ಲೇಖಿಸಿದ್ದರು. ಅಲ್ಲದೇ, ಫಲಾನುಭವಿಗಳಿಂದ ಲಂಚ ಪಡೆದಿರುವ ಬಗ್ಗೆಯೂ ಉಲ್ಲೇಖಿಸಿದ್ದರು. ಈ ದೂರಿನ ಆಧಾರದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಒಂಬುಡ್ಸ್‌ಮನ್ ಅಧಿಕಾರಿ ಪಿ ಡಿ ಗಣಪತಿ ಎಂಬುವವರು ವಿಚಾರಣೆ ನಡೆಸಿ, 2024ರ ಜನವರಿ 22ರಂದು ತನಿಖಾ ವರದಿಯನ್ನು ಸಂಬಂಧಪಟ್ಟವರಿಗೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂಬುಡ್ಸ್‌ಮನ್ ವರದಿಯಲ್ಲಿ ಏನಿದೆ?

ಒಂಬುಡ್ಸ್‌ಮನ್ ಅವರು ತಮ್ಮ ತನಿಖಾ ವರದಿಯಲ್ಲಿ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಗುರುನಾಥ್ ಅವರು ತನ್ನ ಪತ್ನಿಯ ಹೆಸರಿನಲ್ಲಿ ಜಾಬ್ ಮಾಡಿಸಿದ್ದಾರೆ. ಅಲ್ಲದೇ, ಪತಿಯ ಜಾಗದ ಕಾಲಂನಲ್ಲಿ ತನ್ನ ಹೆಸರನ್ನೂ ಕೂಡ ಸೇರಿಸಿದ್ದಾರೆ. ಪತ್ನಿಯ ಹೆಸರಿನಲ್ಲಿದ್ದ ಕಾರ್ಡಿನಲ್ಲಿ ಕೆಲಸ ಮಾಡದೇ ಇದ್ದರೂ ಕೂಡ ಹಾಜರಾತಿಯನ್ನು ಹಾಕಿದ್ದಾರೆ. ಜಾಬ್ ಕಾರ್ಡ್ ಪ್ರಕಾರ, 2019 ರಿಂದ ಮೇ 2023ರವರೆಗೂ ಕೆಲಸ ಮಾಡಿರುವ ಬಗ್ಗೆ ಯಾವುದೇ ಸ್ಪಷ್ಟ ದಾಖಲೆ ಇಲ್ಲ. ಕೆಲಸ ಮಾಡುತ್ತಿರುವ ಫೋಟೋ ಕೂಡ ಇರುವುದಿಲ್ಲ. ಅಲ್ಲದೇ, ನಿರುದ್ಯೋಗ ಭತ್ಯೆಯನ್ನು ಅವರ ಖಾತೆಗೆ ಹಾಕಿ, ನೇರವಾಗಿ ಅಕ್ರಮ ಎಸಗಿರುವುದು ಕಂಡುಬಂದಿದೆ. ಆದ್ದರಿಂದ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದಿದ್ದರು.

Ombusmon
ಒಂಬುಡ್ಸ್‌ಮನ್ ವರದಿಯ ಪ್ರತಿ

ಅಲ್ಲದೇ, 2019 ರಿಂದ ಕೂಲಿ ಕಾರ್ಮಿಕರ ಒಟ್ಟು ₹1,43,800ಗಳ ನಿರುದ್ಯೋಗ ಭತ್ಯೆಯನ್ನು ನೀಡಬೇಕು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅಧಿನಿಯಮದಂತೆ ಇದಕ್ಕೆ ಕಾರಣರಾಗಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ 71,900₹ ಮತ್ತು ಡೇಟಾ ಎಂಟ್ರಿ ಆಪರೇಟರ್ ಗುರುನಾಥ 71,900₹ ವಸೂಲಾತಿ ಮಾಡಿ ಕರ್ನಾಟಕ ಸರ್ಕಾರದ ಎಂಪಿಲೋಯೇಮೆಂಟ್ ಗ್ಯಾರಂಟಿ ಫಂಡ್‌ಗೆ ಜಮಾ ಮಾಡುವಂತೆ ಶಿಫಾರಸ್ಸು ಮಾಡಿದ್ದರು.

ಮನರೇಗಾ ಯೋಜನೆಯ ತಂತ್ರಾಂಶವನ್ನು ಆಗಿಂದಾಗ್ಗೆ ಪರಿಶೀಲಿಸದೇ ಕೂಲಿ ಕಾರ್ಮಿಕರಿಗೆ ಕೆಲಸವನ್ನು ನೀಡದೇ ನಿರುದ್ಯೋಗ ಭತ್ಯೆಯ ಅಕ್ರಮಕ್ಕೆ ಕಾರಣರಾಗಿರುವ ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಗೆ ಗಂಭೀರವಾದ ಎಚ್ಚರಿಕೆಯನ್ನು ನೀಡಿ, ಅವರ ಮೇಲೆ ನಿಯಮಾವಳಿಯಂತೆ ಅಗತ್ಯ ಕ್ರಮ ವಹಿಸಲು ಶಿಫಾರಸ್ಸು ಮಾಡಿ ಪ್ರಕರಣವನ್ನು ವಿಲೇವಾರಿ ಮಾಡಲು ಶಿಫಾರಸ್ಸು ಮಾಡಿದ್ದರು. ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ವರದಿಯಲ್ಲಿ ತಿಳಿಸಿದ್ದರು. ಅಲ್ಲದೇ, ಫಲಾನುಭವಿಗಳಿಂದ ಲಂಚ ಪಡೆದಿರುವ ಬಗ್ಗೆಯೂ ಬಂದಿದ್ದ ದೂರನ್ನು ಉಲ್ಲೇಖಿಸಿದ್ದ ಒಂಬುಡ್ಸ್‌ಮನ್ ಅವರು, ಈ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ವರದಿಯಲ್ಲಿ ತಿಳಿಸಿದ್ದರು.

ಆದರೆ, ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ದುರುಪಯೋಗಪಡಿಸಿದ್ದು ಒಂಬುಡ್ಸ್‌ಮನ್ ತನಿಖೆಯಲ್ಲಿ ಸಾಬೀತಾಗಿದ್ದರೂ, ಸಿಬ್ಬಂದಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಪಂಚಾಯತ್ ಈವರೆಗೆ ಕ್ರಮ ಕೈಗೊಂಡಿಲ್ಲ ಎಂದು ದೂರುದಾರ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತ ಮಂಜುನಾಥ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

Manjunath 1
ದೂರುದಾರ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತ ಮಂಜುನಾಥ್

“ಕಂಪ್ಯೂಟರ್ ಆಪರೇಟರ್ ಸರ್ಕಾರಿ ಸಿಬ್ಬಂದಿಯಲ್ಲ. ಈತನೊಂದಿಗೆ ಪಂಚಾಯತ್ ಅಧಿಕಾರಿಗಳು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ, ಪಂಚಾಯತ್ ಸದಸ್ಯರು ಸಭೆ ನಡೆಸಿ, ಯಾರೂ ನಮಗೆ ದೂರು ಕೊಟ್ಟಿಲ್ಲ ಎಂದು ತಿಳಿಸಿ ಈವರೆಗೆ ಏನೂ ಕ್ರಮ ಕೈಗೊಂಡಿಲ್ಲ. ಕಂಪ್ಯೂಟರ್ ಆಪರೇಟರ್ ರಾಜ್ಯ ಒಂಬುಡ್ಸ್‌ಮನ್‌ಗೆ ಈ ಬಗ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಅಂತ ಸಬೂಬು ಹೇಳಿ, ಹಾಗೆಯೇ ಇಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಒಂಬುಡ್ಸ್‌ಮನ್ ಪಿ ಡಿ ಗಣಪತಿ ಅವರ ತನಿಖಾ ವರದಿಯಲ್ಲಿ ಎಲ್ಲ ಆರೋಪಗಳು ಸಾಬೀತಾಗಿದೆ. ಆದರೆ, ಈ ಬಗ್ಗೆ ಇಓ ಹಾಗೂ ಶಿವಮೊಗ್ಗ ಜಿ.ಪಂ ಸಿಇಓ ಎಂಟು ತಿಂಗಳಾದರೂ ಈವರೆಗೆ ಏನೂ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ನಾವು ಮೇಲ್ಮನವಿ ಸಲ್ಲಿಸಿದ್ದೇವೆ. ಒಂಬುಡ್ಸ್‌ಮನ್ ವರದಿಯನ್ನು ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಸಾಮಾಜಿಕ ಹೋರಾಟಗಾರ ಮಂಜುನಾಥ್ ಆಕ್ರೋಶ ಹೊರಹಾಕಿದ್ದಾರೆ.

ಹುರುಳಿ 1

ಈ ಎಲ್ಲ ಬೆಳವಣಿಗೆಗಳ ನಡುವೆ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಆಗಿರುವ ಗುರುನಾಥ, ತಾನು ನಿರಪರಾಧಿ ಎಂದು ಉಲ್ಲೇಖಿಸಿ ಈ ವರದಿಯ ವಿರುದ್ಧ ರಾಜ್ಯ ಒಂಬುಡ್ಸ್‌ಮನ್‌ಗೆ ಮೇಲ್ಮನವಿ ಸಲ್ಲಿಸಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...