ಶಿವಮೊಗ್ಗ | ಜನರ ಬದುಕಿಗೆ ಶಕ್ತಿ ಕೊಡದ ಬಿ ವೈ ರಾಘವೇಂದ್ರಗೆ ಏಕೆ ಮತ ಹಾಕಬೇಕು; ಡಿಸಿಎಂ

Date:

ಜನರ ಬದುಕಿಗೆ ಶಕ್ತಿ ಕೊಡದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಏಕೆ ಮತ ಹಾಕಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ, ಶಿಫಾರಸು ಕೂಡ ರಾಘವೇಂದ್ರ ಮಾಡಿಸಲಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಅವರದ್ದೇ ಸರ್ಕಾರ (ಬಿಜೆಪಿ) ಅಧಿಕಾರದಲ್ಲಿ ಇತ್ತು. ಸ್ವತಃ ಯಡಿಯೂರಪ್ಪ ಸಿಎಂ ಆಗಿದ್ದರೂ ಏನೂ ಮಾಡಲಿಲ್ಲ. ಭದ್ರಾವತಿಯ ಎರಡು ಕಾರ್ಖಾನೆಗಳಲ್ಲಿ ಒಂದು ಕಣ್ಣು ಮುಚ್ಚಿದರೆ ಮತ್ತೊಂದು ಕೊನೆಯ ಹಂತದಲ್ಲಿದೆ. ಅವುಗಳನ್ನು ಉಳಿಸಲು ಮುಂದಾಗಲಿಲ್ಲ ಎಂದು ಹರಿಹಾಯ್ದರು.

ನಮ್ಮ ಗ್ಯಾರಂಟಿ (ಪ್ರಣಾಳಿಕೆ) ನಿಜ, ಬಿಜೆಪಿಯವರ ಭರವಸೆ ಬರೀ ಸುಳ್ಳು ಎಂದು ವಾಗ್ದಾಳಿ ನಡೆಸಿದ ಅವರು, ನಮ್ಮದು ಜನರ ಬದುಕಿನ ಪ್ರಶ್ನೆಯಾದರೆ, ಅವರು ಜನರ ಭಾವನೆಗಳ ಮೇಲೆ ಮತ ಕೇಳುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿ ಕೊಟ್ಟ ಮಾತಿನಂತೆ ನಡೆದಿರುವ ಕಾಂಗ್ರೆಸ್ ಬಸವಣ್ಣನವರ ನುಡಿದಂತೆ ನಡೆಯುವ ಆಶಯ ಈಡೇರಿಸಿದೆ. ಆದರೆ, ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರಾ? ಆದ್ದರಿಂದ, ಇಲ್ಲಿ ಯಡಿಯೂರಪ್ಪ ಪುತ್ರನಿಗೆ ಏಕೆ ಮತ ಹಾಕಬೇಕು ಎಂದು ‍ಪ್ರಶ್ನಿಸಿದರು.

ಗುರುಗಳ (ಬಂಗಾರಪ್ಪ) ಪುತ್ರಿಯ (ಗೀತಾ ಶಿವರಾಜಕುಮಾರ) ನಾಮಪತ್ರ ಸಲ್ಲಿಕೆಯಾಗಿದೆ. ಜಿಲ್ಲೆಯ ಜನರು ಗೀತಾ ಅವರಿಗೆ ಅವಕಾಶ ಕೊಡುವ ನಂಬಿಕೆ ಇದೆ. ಶಿವಮೊಗ್ಗದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದರು.

ದೇಶದಲ್ಲಿ 400 ಸ್ಥಾನ ಕೊಡಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರೂ ಆತನನ್ನು ಬಿಜೆಪಿಯಿಂದ ತೆಗೆದು ಹಾಕಲಿಲ್ಲ. ಜನಾಕ್ರೋಶದ ಕಾರಣ ಈಗ ಸಂವಿಧಾನ ಉಳಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನಲ್ಲಿನ ಕಪ್ಪು ಹಣ ಎಂದು ಬೋಗಸ್ ಪಟ್ಟಿ ಬಿಟ್ಡು ಪ್ರಚಾರ ಪಡೆದುಕೊಂಡರು. ಕಪ್ಪು ಹಣ ವಾಪಸ್ ತರಲಿಲ್ಲ. 15 ಲಕ್ಷ ರೂ. ಅಕೌಂಟ್‌ಗೆ ಹಾಕಲಿಲ್ಲ. ಉದ್ಯೋಗ ಕೊಡಲು ಆಗಲಿಲ್ಲ. ಹೀಗಿದ್ದಾಗ ಬಿಜೆಪಿಗೆ ಏಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಕೇಂದ್ರ ಬಜೆಟ್‌ನಲ್ಲಿ ಪ್ರಕಟಿಸಿ ಒಂದು ಪೈಸೆ ಕೊಡಲಿಲ್ಲ. ಆ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಚಕಾರ ಎತ್ತುತ್ತಿಲ್ಲ. ಒಮ್ಮೆಯಾದರೂ ಸಂಸತ್ ಕಲಾಪದಲ್ಲಿ ರೈತರ ಪರವಾಗಿ ಮಾತನಾಡಿದ್ದರೆ ಉತ್ತರ ಕೊಡಪ್ಪ ರಾಘವೇಂದ್ರ ಎಂದು ಹೇಳಿದರು.

ಬಿಜೆಪಿ ಈ ಬಾರಿ 14 ಮಂದಿ ಹಾಲಿ ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ. ಅವರ ಮುಖ ಸರಿ ಇಲ್ಲವೇ? ಅವರಿಗೆಲ್ಲ ಏನು ಕಡಿಮೆ ಆಗಿತ್ತು. ಏನು ತಪ್ಪು ಮಾಡಿದ್ದರು ಎಂದು ವ್ಯಂಗ್ಯವಾಡಿದರು.

ಇದೇ ವೇಳೆ, ಗ್ಯಾರಂಟಿ ಯೋಜನೆಯ ಲಾಭ ಪಡೆಯುವ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿ, ಮಾಡಬಾರದ್ದು ಮಾಡಿ ಈಗ ತಪ್ಪಾಯ್ತು ಕ್ಷಮಿಸಿ ಬಿಡಿ ಅಂದರೆ ಯಾರು ಕೇಳ್ತಾರೆ ಕುಮಾರಣ್ಣ ಎಂದು ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.

ಗ್ಯಾರಂಟಿಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಅಂದರೆ ಏನರ್ಥ. ಹಳ್ಳಿಯಲ್ಲಿ ಇದಕ್ಕೆ ಏನು ಅರ್ಥ. ಇದು ನಮ್ಮ ಗ್ರಾಮೀಣ ಮಹಿಳೆಯರು ಮಾತ್ರವಲ್ಲ, ಇಡೀ ಮನುಕುಲಕ್ಕೆ ಮಾಡಿದ ಅಪಮಾನ. ಜನ ರೊಚ್ಚಿಗೆದ್ದಿದ್ದಾರೆ ಎಂದರು.

ಹೆಣ್ಣು ಮಕ್ಕಳು ಕೂಡ ಅವರನ್ನು ಕುಮಾರಣ್ಣ ಎನ್ನುತ್ತಾರೆ. ನಾನೂ ಹಾಗೆಯೇ ಕರೆಯುವೆ. ಇದು ರಾಜ್ಯದ 1.5 ಕೋಟಿ ಹೆಣ್ಣುಮಕ್ಕಳ ಸ್ವಾಭಿಮಾನದ ಪ್ರಶ್ನೆ. ಎಚ್‌ ಡಿ ಕುಮಾರಸ್ವಾಮಿ ಆಡಿರುವ ಹಗುರ ಮಾತಿಗೆ ಯಡಿಯೂರಪ್ಪ, ಆರ್‌ ಅಶೋಕ್‌, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌, ನಟ ಶಿವರಾಜ್‌ ಕುಮಾರ್‌, ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್, ಬಿ ಕೆ ಸಂಗಮೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಸೂಡ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಮಲೆ‌ನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ, ಎಂ ಶ್ರೀಕಾಂತ, ಎಚ್ ಸಿ ಯೋಗೀಶ್, ಎನ್ ರಮೇಶ್, ಶ್ರೀನಿವಾಸ ಕರಿಯಣ್ಣ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...