ಶಿವಮೊಗ್ಗ | ಭರತ ಹುಣ್ಣಿಮೆ; ಚಂದ್ರಗುತ್ತಿಯಲ್ಲಿ ಭಕ್ತ ಸಾಗರ

Date:

ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಜಿಲ್ಲೆಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು. ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ  ಹಾಗೂ ತೊಟ್ಟಿಲು ಬಾವಿಗೆ  ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವರಿಗೆ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಸಲ್ಲಿಸಿದ ಭಕ್ತರು, ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಹರಕೆಗಳನ್ನು ದೇವರಿಗೆ ಸಲ್ಲಿಸಿದರು. ದೇವಸ್ಥಾನದ ಬಳಿ ಒಲೆ ಹೂಡಿ ಕರಿದ ಹೋಳಿಗೆ, ರೊಟ್ಟಿ, ಬುತ್ತಿ ತಯಾರಿಸಿ ರೇಣುಕಾಂಬೆಗೆ ನ್ಯೆವೇದ್ಯ ಅರ್ಪಿಸಿ, ಸಾಮೂಹಿಕ ಭೋಜನ ಮಾಡಿದರು.

ಸಂಜೆ ವೇಳೆಗೆ ದೇವಸ್ಥಾನದಲ್ಲಿ ಶ್ರೀದೇವಿಯ ಪಲ್ಲಕ್ಕಿ ಉತ್ಸವ, ಮಂಗಳಾರತಿ ಕಟ್ಟೆ, ರಥ ಬೀದಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ವಿವಿಧ ವಾಧ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದ ರಥ ಬೀದಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು. ಪೊಲೀಸರು ದೇವಸ್ಥಾನದ ಬಳಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...