ಶಿವಮೊಗ್ಗ | ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

Date:

ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದ 14 ನೇ ವಾರ್ಡಿನಲ್ಲಿ ಬುಧವಾರ (ಏ.10) ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗೀತಾ ಅವರ ರಕ್ತದಲ್ಲಿಯೇ ಸಮಾಜ ಸೇವೆಯ ಗುಣ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಸಾಮಾಜಿಕ ಮೌಲ್ಯಗಳನ್ನು ಗೀತಾಗೆ ವರವಾಗಿ ನೀಡಿ ಹೋಗಿದ್ದಾರೆ. ಇದು ರಾಜಕೀಯ ಪ್ರವೇಶಕ್ಕೆ ಪ್ರೇರಣೆ ನೀಡಿದೆ ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂದೆ ಇದ್ದಾರೆ. ಗೀತಾಗೆ ಒಂದು ಅವಕಾಶ ಕೊಡಿ ನಾನು ಅವರಿಂದ ಕೆಲಸ ಮಾಡಿಸುತ್ತೇನೆ‌ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಶಿವಮೊಗ್ಗ ಜನರ ಸೇವೆ ಮಾಡಲು ಸಿಕ್ಕ ಅವಕಾಶವಿದು. ಕೇವಲ ಚುನಾವಣೆಯಲ್ಲಿ ಮತಗಳಿಕೆಯ ರಾಜಕೀಯಕ್ಕೆ ಸ್ವಾರ್ಥದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿಲ್ಲ. ಇಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ದುರಾಡಳಿತದಿಂದ ಜನ ಸಾಮಾನ್ಯರನ್ನು ಮುಕ್ತಗೊಳಿಸಲು ಈ ಯೋಜನೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಜನರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನೂ ಕೂಡ ಸಾಗಬೇಕು ಎಂದು ಕನಸು ಕಂಡಿದ್ದೇನೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷದವರು ಕಳೆದ 15 ವರ್ಷಗಳಿಂದ ಸುಳ್ಳು ಹೇಳಿಕೊಂಡು, ಜನ ಸಾಮಾನ್ಯರಿಗೆ ಪೊಳ್ಳು ಭರವಸೆ ನೀಡುತ್ತ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ, ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್ ಮಾತನಾಡಿ, ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದು ಓದು ಆರಂಭಿಸಿದ ವಿದ್ಯಾರ್ಥಿಯೊರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿ ಮಾಧ್ಯಮಗಳ ಎದುರು, ತಂದೆಯನ್ನು ಕಳೆದುಕೊಂಡಿರುವ ನನಗೆ ಮತ್ತು ನನ್ನ ತಾಯಿಗೆ ಗೃಹಲಕ್ಷ್ಮಿ ಯೋಜನೆ ನೆರವು ನೀಡಿದೆ ಎಂದು ತಿಳಿಸಿದ್ದಾನೆ‌. ಇದರಿಂದ, ಗ್ಯಾರಂಟಿ ಯೋಜನೆಗಳು ಬಡ ಮಕ್ಕಳ ಓದಿಗೆ ಸಹಕಾರಿ ಆಗಿದೆ ಎನ್ನುವುದನ್ನು ಜನ ಸಾಮಾನ್ಯರು ಅರ್ಥೈಸಿಕೊಳ್ಳಬೇಕು ಎಂದರು.

ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ಕಲೀಂ ಪಾಶ, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ ಸೇರಿ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...