ಶಿವಮೊಗ್ಗ | ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡದಿರುವಂತೆ ಒತ್ತಾಯಿಸಿ ರೈತ ಸಂಘದ ಮನವಿ

Date:

ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡಬೇಡಿ, ಒಂದು ವೇಳೆ ಬಿಟ್ಟರೆ ಲಕ್ಷಾಂತರ ಎಕರೆ ಅಡಿಕೆ ಫಸಲುಗಳ ಮಾರಣಹೋಮವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದೆ.

ಮನವಿಯಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ 1ಲಕ್ಷಕ್ಕೂ ಹೆಚ್ಚಿಗೆ ಎಕರೆ ಭೂಮಿಯಲ್ಲಿ ಬೆಳೆ ಬೆಳೆದಿರುವ ತೋಟಗಳಿಗೆ ನಾಲೆ ಮುಖಾಂತರ ಕುಡಿಯುವ ನೀರಿಗೆ ನೀರನ್ನು ಹಂಚಿಕೆ ಮಾಡಿ ಪ್ರಕಟಣೆ ಮಾಡಲಾಗಿದೆ. ಈ ದಿನದ ಭದ್ರಾ ಅಣೆಕಟ್ಟೆಯ ನೀರಿನ ಮಟ್ಟ 124.8ಅಡಿ ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹಣೆ ಇದ್ದು ಇದರಲ್ಲಿ 13 ಟಿಎಂಸಿ ಉಪಯೋಗಕ್ಕೆಬಾರದ (Dead Storage) ನೀರನ್ನು ಹೊರತುಪಡಿಸಿ, 4.5 ಟಿಎಂಸಿ ನೀರನ್ನು ನಾಲೆ ಮುಖಾಂತರ ಹರಿಸಬಹುದಾಗಿದೆ.

ಇದರಲ್ಲಿ ನಾಲೆ ಮುಖಾಂತರ ಕುಡಿಯುವ ನೀರಿಗೆ 1.5 ಟಿಎಂಸಿ ನೀರು ಹರಿಸಬೇಕು. ಉಳಿದ 3 ಟಿಎಂಸಿ ನೀರು 10ದಿನಗಳಿಗೆ ಸಾಕಾಗುತ್ತದೆ. ಭದ್ರಾ ಸಲಹಾ ಸಮಿತಿ ಪ್ರಕಟಣೆ ಪ್ರಕಾರ ದಿನಾಂಕ 23-04-2024 ರಿಂದ 06-05-2024 ರವೆರೆಗೆ ನೀರು ಹರಿಸುವ ಒಂದು ಕಂತು ಇನ್ನೂ ಬಾಕಿ ಇದೆ. ಆದರೆ ಬೆಳೆದು ನಿಂತ ತೋಟಗಳಿಗೆ ನೀರು ಹರಿಸಲು 4ದಿನದ ಕೊರತೆ ಉಂಟಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ನದಿ ಮುಖಾಂತರ ಕುಡಿಯುವ ನೀರಿಗಾಗಿ ಕಾಯ್ದಿರಿಸಿರುವುದಕ್ಕಿಂತ 1 ಟಿಎಂಸಿ ನೀರು ಹೆಚ್ಚಿಗೆ ಬಿಡಲಾಗಿದೆ. ಈಗ ನದಿ ಮುಖಾಂತರ ಬಿಡಲು ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹವಿಲ್ಲ.

ದಿನಾಂಕ 30-03-2024 ರಿಂದ 06-04-2024ರವರೆಗೆ 7ದಿನಗಳ ಕಾಲ ನೀರು ಹರಿಸಿದ್ದು ಗದಗ, ಬೆಟಗೇರಿ ನಗರದ ಕುಡಿಯುವ ನೀರಿಗೆ 12-04-2024ರವರೆಗೆ ನೀರು ಹರಿಸಿದೆ. ಈ ಹಿಂದಿನ ದಿನಗಳಲ್ಲಿ ಒಂದು ಸಾರಿ ನೀರು ಬಿಟ್ಟರೆ 3ತಿಂಗಳುಗಳವರೆಗೂ ಆ ನೀರನ್ನು ಉಪಯೋಗಿಸುತ್ತಿದ್ದರು. ಈಗ ವಾರದ ಒಳಗಡೆ ಗದಗ, ಬೆಟಗೇರಿ ನಗರಕ್ಕೆ 2 ಟಿಎಂಸಿ ಕುಡಿಯುವ ನೀರನ್ನು ಹರಿಸಲು ನೀರಾವರಿ ಇಲಾಖೆಗೆ ಸನ್ಮಾನ್ಯ ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ. ಪಾಟೀಲ್‌ರವರು ಪತ್ರ ಬರೆದಿರುವುದು ಆಶ್ಚರ್ಯಕರವಾಗಿದೆ. ಈಗ ನದಿಗೆ ನೀರು ಹರಿಸಲು ನೀರು ಕೇಳುತ್ತಿರುವುದು ನದಿ ಪಾತ್ರದ ತೋಟಗಳಿಗೆ ವಿನಃ ಕುಡಿಯುವುದಕ್ಕಾಗಿ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಸರ್ಕಾರ ಈಗ ಕುಡಿಯುವ ನೀರಿನ ನೆಪದಲ್ಲಿ 2 ಟಿಎಂಸಿ ನೀರು ಹರಿಸಿದರೆ ಶಿವಮೊಗ್ಗ, ದಾವಣಗೆರೆ, ಹಾವೇರಿ 3 ಜಿಲ್ಲೆಯ ರೈತರ ಲಕ್ಷಾಂತರ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿದು ಹಾಕಿ ಕೋಟ್ಯಾಂತರ ರೂಪಾಯಿ ರೈತರಿಗೆ ನಷ್ಟವಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ನದಿಗೆ ನೀರು ಹರಿಸಲು ಸರ್ಕಾರ ತೀರ್ಮಾನ ಮಾಡಬಾರದೆಂದು ಒತ್ತಾಯಿಸಿದ್ದಾರೆ.

ಈ ವೇಳೆ ರಾಜ್ಯಾಧ್ಯಕ್ಷ ಎಚ್.ಆರ್, ಬಸವರಾಜಪ್ಪ, ಉಪಾಧ್ಯಕ್ಷ ಶೇಖರಪ್ಪ, ಲ್ಲಾಧ್ಯಕ್ಷ ಕೆ. ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷರು ಎಂ. ನಂಜುಂಡಪ್ಪ, ಸಿ.ಚಂದ್ರಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...