ಶಿವಮೊಗ್ಗ | ಕೌಟುಂಬಿಕ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

Date:

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳೆಯೊಬ್ಬರಿಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಡೆದಿದ್ದು, ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭದ್ರಾವತಿ ನಗರದ ದಾನವಾಡಿಯ ಜಯಲಕ್ಷ್ಮಿ ಮತ್ತು ಚರಣ್ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಹೆಣ್ಣುಮಗುವಿದೆ. ಇದಾದ ಬಳಿಕ ಗಂಡನ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪ ವ್ಯಕ್ತವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಆನಂದಪುರ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿರುವ ದಂಪತಿಗೆ ಒಂದು ಹೆಣ್ಣುಮಗುವಿದೆ. ಆದರೆ, ಸಂತ್ರಸ್ತ ಮಹಿಳೆಗೆ ಅವರ ಕುಟುದಲ್ಲಿ ಕಿರುಕುಳ ನೀಡುತ್ತಿದ್ದುದು ಬೆಳಕಿಗೆ ಬಂದಿದೆ. ಬಳಿಕ ಆಕೆಯ ಗಂಡ ಮತ್ತು ಅತ್ತೆ ಸೇರಿಕೊಂಡು ಆಕೆಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿದ್ದಾರೆ” ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೊಸೆಗೆ ವಿಷ ಕುಡಿಸಿದ ಬಳಿಕ ಮಾವನೂ ಕೂಡ ಫಿನಾಯಿಲ್‌ ಕುಡಿದಿದ್ದಾರೆ. ಇಬ್ಬರನ್ನೂ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಚೇತರಿಕೆ ಕಾಣತೊಡಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

“ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯ ಅತ್ತೆ ಮತ್ತು ಗಂಡ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚರಣ್, ಗಾಯಿತ್ರಿ , ಪ್ರಸನ್ನ, ಗೌತಮ್ ಬಂಧಿತ ಆರೋಪಿಗಳು” ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆ

ಭದ್ರಾವತಿಯ ದಾನವಾಡಿಯಲ್ಲಿದ್ದ ಜಯಲಕ್ಷ್ಮಿ ಅವರು ಕೌಟುಂಬಿಕ ಕಲಹವನ್ನು ತಿಳಿಗೊಳಿಸಿರೆಂದು ಗಂಡನ ಊರಾದ ಆನಂದಪುರ ಬಳಿಯ ದಾಸನಕೊಪ್ಪದ ದೇವಸ್ಥಾನಕ್ಕೆ ಮನವಿ ಮಾಡಿದ್ದರು. ನಿಗದಿಯಾದ ದಿನದಂದು ಮಧ್ಯಾಹ್ನ 2 ಗಂಟೆಗೆ ಕಲಹದ ಕುರಿತು ಇತ್ಯರ್ಥಗೊಳಿಸಲಾಗಿತ್ತು. ಆದರೆ ಮಾವ ಸುಧಾಕರ್ ಹೋಗಿ ಗಲಾಟೆ ಮಾಡಿದ ಪರಿಣಾಮ, ಸೊಸೆ ಜಯಲಕ್ಷ್ಮಿಯವರಿಗೆ ವಿಷ ಕುಡಿಸಿದ್ದು, ಇದೇ ವೇಳೆ ಮಾವನೂ ಕೂಡಾ ಫಿನಾಯಿಲ್ ಸೇವಿಸಿರುವುದಾಗಿ ಹೇಳಲಾಗುತ್ತಿದೆ.

ವರದಿ: ಅಮಿತ್ ಆರ್, ಆನಂದಪುರ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...