ಶಿವಮೊಗ್ಗ | ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

Date:

ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ತನಿಕಲ್‌ನ ಪಾಂಡ್ಯ ಗ್ರಾಮದ ನಿವಾಸಿ ಪ್ರಥಮ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಸಕ್ರೆಬೈಲು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಬೆಜ್ಜವಳ್ಳಿಯ ಬಳಿ ಬೈಕಿನಲ್ಲಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ಡಿಪ್ಲೋಮಾ ವಿದ್ಯಾರ್ಥಿ ಪ್ರಥಮ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪ್ರಥಮ್‌ನನ್ನು ಕೂಡಲೇ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಅಘಪಾತದ ಭೀಕರ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಬೈಕ್ ಸವಾರ ಏಕಾಏಕಿ ಮುಖ್ಯ ರಸ್ತೆ ಪ್ರವೇಶಿಸಿರುವುದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್‌ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನ ಮುಂಭಾಗ ಸಹ ನಜ್ಜುಗುಜ್ಜಾಗಿದೆ.

ಇದನ್ನು ಓದಿದ್ದೀರಾ? ‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...