ಶಿವಮೊಗ್ಗ | ಚಾಲನೆಯ ವೇಳೆ ಮೊಬೈಲ್ ಬಳಸಿದ ಖಾಸಗಿ ಬಸ್ ಚಾಲಕ: ಬಿತ್ತು ಐದು ಸಾವಿರ ದಂಡ!

Date:

ಬಸ್ ಚಲಾಯಿಸುತ್ತಿದ್ದ ವೇಳೆ ಮೊಬೈಲ್ ಬಳಸುತ್ತಿದ್ದ ಚಾಲಕನಿಗೆ ಪ್ರಯಾಣಿಕರೋರ್ವರ ದೂರಿನ ಮೇರೆಗೆ ಟ್ರಾಫಿಕ್ ಪೊಲೀಸರು ಐದು ಸಾವಿರ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ- ತೀರ್ಥಹಳ್ಳಿ- ಉಡುಪಿ- ಮಂಗಳೂರಿಗೆ ದಿನ ನಿತ್ಯ ತೆರಳುವ ನವದುರ್ಗಾ ಪ್ರಸಾದ್(ಕೆ ಎ 18
ಸಿ 4794 ನಂಬರ್) ಖಾಸಗಿ ಬಸ್‌ನ ಚಾಲಕ ರಾಜೇಶ್ ಎಂಬುವವರು, ಪ್ರತಿನಿತ್ಯ ಪ್ರಯಾಣಿಕರನ್ನು ಕರೆದುಕೊಂಡು ತೆರಳುವಾಗ ಮೊಬೈಲ್ ಬಳಕೆ ಮಾಡುತ್ತಿದ್ದರು. ಅಲ್ಲದೇ, ತೀಕ್ಷ್ಣ ತಿರುವು ಇರುವ ರಸ್ತೆಯಲ್ಲಿ ಸಹ ಪ್ರಯಾಣಿಕರು ರಕ್ಷಣೆ ಸುರಕ್ಷತೆ ಲೆಕ್ಕಿಸದೆ ಮೊಬೈಲ್ ಬಳಸುತ್ತಿದ್ದರು. ಮೊಬೈಲ್‌ನಲ್ಲಿ ಮಾತಾಡುತ್ತ ವಾಹನ ಚಲಾಯಿಸುತ್ತಿದ್ದನ್ನು ಗಮನಿಸಿದ ಪ್ರಯಾಣಿಕರೋರ್ವರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಸೆರೆ ಹಿಡಿದಿದ್ದರು. ಬಳಿಕ ಈ ವಿಡಿಯೋವನ್ನು ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ಕಳುಹಿಸಿ, ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದರು.

ಈ ವಿಡಿಯೋ ದೂರನ್ನು ಆಧರಿಸಿ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಸಂತೋಷ್ ಅವರು ನವದುರ್ಗಾ ಪ್ರಸಾದ್‌ ಖಾಸಗಿ ಬಸ್‌ನ ಚಾಲಕನಿಗೆ 5000₹ ದಂಡ ವಿಧಿಸಿದ್ದಾರೆ. ಅಲ್ಲದೇ, ದೂರು ನೀಡಿದ್ದ ಪ್ರಯಾಣಿಕನಿಗೂ ದಂಡ ವಿಧಿಸಿದ ಬಿಲ್‌ನ ಪ್ರತಿಯನ್ನು ಪೊಲೀಸರು ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ, ಸಂಪೂರ್ಣ ಸಮಿತಿ ವಿಸರ್ಜನೆ

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಆಗದಂತೆ ಎಚ್ಚರ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇತರೆ ಚಾಲಕರಿಗೆ ಎಚ್ಚರಿಕೆ ಆಗಿರಲಿ ಎಂಬ ಸಂದೇಶವನ್ನು ಪೊಲೀಸರು ರವಾನಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...