ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Date:

ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರಿಗೆ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಫೆಬ್ರವರಿ 24ರಂದು ತೀರ್ಪು ನೀಡಿದೆ.

ಸಾಗರ ಪಟ್ಟಣದ ನಿವಾಸಿಗಳಾದ ಅರುಣ ಯಾನೆ ಗೆಂಡೆ ಅರುಣ್(27), ಅಭಿಜಿತ್(28) ಹಾಗೂ ಇರ್ಫಾನ್‌(20) ಜೀವಾವಧಿ ಶಿಕ್ಷೆಗೊಳಗಾದವರು ಎಂದು ಗುರುತಿಸಲಾಗಿದೆ. ಮೂವರಿಗೆ ತಲಾ ₹10,000 ದಂಡ ವಿಧಿಸಿ ನ್ಯಾಯಾಧೀಶೆ ಪ್ರಭಾವತಿಯವರು ಈ ತೀರ್ಪು ನೀಡಿದ್ದಾರೆ.

1001280869

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯಕ್ ಜಿ ಅವರು ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ 2020ರ ಸೆಪ್ಟೆಂಬರ್‌ 12ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ಸಿರವಂತೆ ಗ್ರಾಮದ ನಿವಾಸಿಯಾದ 44 ವರ್ಷದ ಮಹಿಳೆಯೋರ್ವರ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001280874

ಕೊಲೆ ಮಾಡಿದ ಬಳಿಕ ಮಹಿಳೆಯ ಬಳಿಯಿದ್ದ ಬಂಗಾರದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಮೃತೆಯ ತಾಯಿ ನೀಡಿದ ದೂರಿನ ಮೇರೆಗೆ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 276/2020 ಐಪಿಸಿ ಕಲಂ 302 ರೀತ್ಯಾ ಪ್ರಕರಣ ದಾಖಲಾಗಿತ್ತು. ಅಂದಿನ ಸರ್ಕಲ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿ ಮೂವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ದಾಖಲಿಸಿದ್ದರು.

1001280873

ನ್ಯಾಯಾಲಯದ ತೀರ್ಪಿನ ಕುರಿತಂತೆ ಫೆಬ್ರವರಿ 24 ರಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...