ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ; ಚರ್ಚ್‌ ಫಾದರ್‌ಗೆ ನ್ಯಾಯಾಂಗ ಬಂಧನ

Date:

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಶಿವಮೊಗ್ಗದ ಚರ್ಚ್‌ ಪಾದ್ರಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಚರ್ಚ್‌ ಪಾದ್ರಿ ಫ್ರಾನ್ಸಿಸ್ ಫರ್ನಾಂಡಿಸ್ ಎಂಬವರು ತಮ್ಮದೇ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಂಜಾರ ಸಮುದಾಯದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಆರೋಪಿ ಪಾದ್ರಿ ವಿರುದ್ಧ ಶಿವಮೊಗ್ಗ ಕೋಟೆ ಪೊಲೀಸರು ಪೋಕ್ಸೋ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಪ್ರಕರಣ ದಾಖಲಿಸಿದ್ದಾರೆ.

ಪಾದ್ರಿಯನ್ನು ಬಂಧಿಸಿದ್ದ ಪೊಲೀಸರು, ಆರೋಪಿಯನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗದ ಚರ್ಚ್ ಪಾದ್ರಿ ಬಂಜಾರ ಸಮುದಾಯದ ಹೆಣ್ಣು ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆತನ ವಿರುದ್ಧ ಈ ಹಿಂದೆಯೂ ಹಲವಾರು ಆರೋಪಗಳು ಕೇಳಿ ಬಂದಿವೆ. ಆದರೂ, ಕಾಲೇಜು ಆಡಳಿತ ಮಂಡಳಿ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಬಂಜಾರ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...