ಸೋಮವಾರ ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.
ಜಂಬರಘಟ್ಟ ಗ್ರಾಮದ ನಿವಾಸಿ ಉಮಮ್ಮು ಕುಲ್ಸುಂ (14) ಮೃತಪಟ್ಟ ವಿದ್ಯಾರ್ಥಿನಿ. ಇವರು ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿತ್ತು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ
ಉಮ್ಮು ಕುಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





