ಶಿವಮೊಗ್ಗ | ನವಜಾತ ಶಿಶುವನ್ನು ಕಚ್ಚಿಕೊಂಡು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಓಡಾಡಿದ ಬೀದಿನಾಯಿ; ಪ್ರಕರಣ ದಾಖಲು

Date:

  • ನವಜಾತ ಶಿಶು ಯಾರದ್ದೆಂಬುದು ಪತ್ತೆಯಾಗಿಲ್ಲ
  • ನವಜಾತ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ

ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ಬೀದಿನಾಯಿಯೊಂದು ಓಡಾಡುತ್ತಿದ್ದ ಘಟನೆ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಮಾರ್ಚ್ 31 ರ ಮುಂಜಾನೆ ನಾಯಿ ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ಹೋಗುತ್ತಿರುವುದು ಕಂಡುಬಂದಿದೆ, ಆದರೆ ಈ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಭದ್ರತಾ ಸಿಬ್ಬಂದಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ಬೀದಿ ನಾಯಿ ಓಡಾಡುತ್ತಿರುವುದನ್ನು ನೋಡಿ, ಶುಕ್ರವಾರ(ಮಾ.31) ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಬಂದ ಕೂಡಲೇ, ಕೆಲವರು ಮಾಹಿತಿ ನೀಡಿದ್ದಾರೆ” ಎಂದು ಭದ್ರತಾ ಸಿಬ್ಬಂದಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆರಿಗೆ ವಾರ್ಡ್‌ಗಳಿರುವ ಕಟ್ಟಡದಿಂದ ನಾಯಿ ಬಂದಿದೆಯೆಂದು ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅವರು ಕಟ್ಟಡಕ್ಕೆ ಹೋದಾಗ, ನಾಯಿ ಇನ್ನೂ ಮಗುವನ್ನು ತನ್ನ ಬಾಯಿಯಲ್ಲಿ ಕಚ್ಚಿ ಹಿಡಿದುಕೊಂಡು ಓಡಾಡುತ್ತಿರುವುದನ್ನು ನೋಡಿದ್ದಾರೆ. ಅಷ್ಟೊತ್ತಿಗಾಗಲೇ ಮಗು ಮೃತಪಟ್ಟಿರುವುದಾಗಿ ದೂರಿನಲ್ಲಿ ದಾಖಲಿಸಿದ್ದಾರೆ.

ಮಗು ಹುಟ್ಟಿದ ಸ್ವಲ್ಪ ಸಮಯದ ಬಳಿಕ ಸಾವನ್ನಪ್ಪಿರಬಹುದು ಅಥವಾ ಅಕ್ರಮ ಸಂಬಂಧದಿಂದ ಮಗು ಜನಿಸಿರಬಹುದು ಇಲ್ಲವೇ ಮೃತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಯಾರೋ ಮನೆ ತೊರೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.  

ನವಜಾತ ಶಿಶು ಯಾರದ್ದೆಂದೂ ಪತ್ತೆ ಕೂಡ ಆಗಿಲ್ಲ. ಹಾಗಾಗಿ ಶಿಶುವನ್ನು ಬಿಟ್ಟು ಹೋದ ಪಾಲಕರ ಪತ್ತೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೆಗ್ಗಾನ್ ಆಸ್ಪತ್ರೆ ಭದ್ರತಾ ಸಿಬ್ಬಂದಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತೀರ್ಥಹಳ್ಳಿ – ಕುಂದಾಪುರ ಹೆದ್ದಾರಿಯಲ್ಲಿ ಏ. 15ರ ವರೆಗೆ ವಾಹನ ಸಂಚಾರ ಬಂದ್‌

“ಮೃತ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ದೇಹದ ತೂಕ 900 ಗ್ರಾಂ ಇತ್ತು. ಇದು ಅಕಾಲಿಕ ಹೆರಿಗೆಯೇ ಹೊರತು ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಲಿಲ್ಲ. ಈ ಬಗ್ಗೆ ತನಿಖೆ ನಡೆಸಲು ಮೂರು ತಂಡಗಳನ್ನು ರಚಿಸಲಾಗಿದೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

“ಕಳೆದ 15 ದಿನಗಳಲ್ಲಿ ನಗರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಡೆದ ಎಲ್ಲ ಹೆರಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸುರಗಿಹಳ್ಳಿ ತಿಳಿಸಿದ್ದಾರೆ.

“ಆಸ್ಪತ್ರೆಯ ಆವರಣದಲ್ಲಿ ಹೊರಗಿನಿಂದ ಯಾರೋ ಮಗುವನ್ನು ಇಟ್ಟಿರಬಹುದು, ತನಿಖೆ ನಡೆಯುತ್ತಿದೆ. ಡಿಎನ್ಎ ಪರೀಕ್ಷೆಗಾಗಿ ಮಾದರಿಗಳನ್ನು ಶೀಘ್ರದಲ್ಲೇ ದಾವಣಗೆರೆಯ ಎಫ್ಎಸ್ಎ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...