ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಗೆ ಪದಾಧಿಕಾರಿಗಳ ನೇಮಕದ ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಈ.ದಿನ.ಕಾಮ್ ನೊಂದಿಗೆ ಮಾತನಾಡಿದ ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಫೈರ್ ಬ್ರಾಂಡ್ ಎಂದೇ ಖ್ಯಾತಿಯಾಗಿರುವ ಸುಡೂರ್ ಶಿವಣ್ಣ, ನಮ್ಮಂತ ನಿಷ್ಠಾವಂತ ಕಾರ್ಯಕರ್ತರಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಕ್ಕೆ ಪ್ರಧಾನಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವದು ತುಂಬಾ ಸಂತಸವಾಗಿದೆ ಎಂದರು.
ಪಕ್ಷಕ್ಕೋಸ್ಕರ ಶ್ರಮಿಸಿ ಮತ್ತಷ್ಟು ಉತ್ತಮ ಕೆಲಸ ಮಾಡಲು ಪ್ರೇರಣೆ ನೀಡಿದ ಡಿ.ಕೆ. ಶಿವಕುಮಾರ್, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಎಚ್.ಎಸ್. ಸುಂದರೇಶ್ ಹಾಗೂ ಪಕ್ಷದ ಎಲ್ಲಾ ಮುಖಂಡರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳು ತಿಳಿಸಲು ಇಚ್ಛೆಸುತ್ತೇನೇ ಎಂದರು.
ಎನ್.ಡಿ. ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ, ಆಕಾಶ್.ಕೆ.ಜಿ, ಉಪಾಧ್ಯಕ್ಷ, ಸೂಡೂರು ಶಿವಣ್ಣ, ಪ್ರಧಾನ ಕಾರ್ಯದರ್ಶಿ, ಚಿನ್ಮಯ್ ಸಿ.ಎಂ, ಪ್ರಧಾನ ಕಾರ್ಯದರ್ಶಿ, ಮಲ್ಲೇಶ್, ಪ್ರಧಾನ ಕಾರ್ಯದರ್ಶಿ, ಸೈಯದ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ, ಪ್ರಶಾಂತ್ ಪ್ರಭು, ಪ್ರಧಾನ ಕಾರ್ಯದರ್ಶಿ, ವಿನಾಯಕ ಗುಡ್ಡೆಮನೆ, ಪ್ರಧಾನ ಕಾರ್ಯದರ್ಶಿ, ಪ್ರವೀಣ್‌ನಾಯ್, ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.




