ಶಿವಮೊಗ್ಗ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಅಪಮಾನ; ಎಸ್‌ಡಿಪಿಐ ತೀವ್ರ ಖಂಡನೆ

Date:

ಸದನದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ʼಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂಬುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ 7 ಜನ್ಮಕೂ ಸ್ವರ್ಗ ಸಿಗುತ್ತಿತ್ತುʼ ಎಂಬ ಹೇಳಿಕೆ ನೀಡಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ತೀವ್ರ ಖಂಡನೀಯ ಎಂದು ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ವಿಶ್ವದಲ್ಲಿಯೇ ಮಾದರಿಯಾಗಿರುವ ಭಾರತೀಯ ಸಂವಿಧಾನದ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೆಸರು ಫ್ಯಾಷನ್ ಅಲ್ಲ, ಅದು ಅವರಿಗೆ ನೀಡುವ ಗೌರವವಾಗಿದೆ. ದಮನಿತರು, ಶೋಷಿತರು, ಬುಡಕಟ್ಟು ಜನಾಂಗ, ಬಡವರು ಮತ್ತು ಮಹಿಳೆಯರ ಹಕ್ಕುಗಳ ಬಗ್ಗೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಅಷ್ಟೇ ಅಲ್ಲ ಭಾರತದಲ್ಲಿ ಇವತ್ತು ದಲಿತರು, ಅಲ್ಪಸಂಖ್ಯಾತರು ಸೇರಿದಂತ ಎಲ್ಲ ವರ್ಗದ ಮಹಿಳೆಯರಿಗೆ ಮೀಸಲಾತಿಯ ಹಕ್ಕು ನೀಡಿರುವವ ಸಂವಿಧಾನದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಸರ್ವ ಭಾರತೀಯರಿಗೆ ಮಾದರಿ. ಇವರನ್ನು ಅಪಮಾನ ಮಾಡಿದರೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ಸಹಿಸಲು ಸಾಧ್ಯವಿಲ್ಲ” ಎಂದು ಸಂಘಟನಾಕಾರರು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಕೇಂದ್ರ ಗೃಹಮಂತ್ರಿ ಬಿಜೆಪಿಯ ಅಮಿತ್ ಶಾ ಭಾರತೀಯರ ಮುಂದೆ ಬಹಿರಂಗ ಕ್ಷಮೆಯಾಚಿಸಲಿ, ಇಲ್ಲದಿದ್ದರೆ ರಾಜಿನಾಮೆ ನೀಡಲಿ” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಇಮ್ರಾನ್, ಉಪಾಧ್ಯಕ್ಷ ದೇವೇಂದ್ರ ಪಾಟಿಲ್, ಪ್ರಧಾನ ಕಾರ್ಯದರ್ಶಿ ಇಸಾಕ್, ಕಾರ್ಯದರ್ಶಿ ಕಲೀಂ, ಖಜಾಂಚಿ ರಹೀಂ, ಜಿಲ್ಲಾ ಸಮಿತಿಯ ಜೀಲಾನ್, ಸಲೀಂ, ಫೈರೋಜ್, ಸಾಧಿಕ್, ಶಾರುಖ್ ಮತ್ತು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...