ಶಿವಮೊಗ್ಗ | ಕುದುರೆ ಗಣಿಯಲ್ಲಿ ಹೋರಿ ಬೆದರಿಸುವ ಹಬ್ಬ; ವಿಜೃಂಭಣೆಯ ಆಚರಣೆ

Date:

ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುದುರೆಗಣಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮಾಭಿವೃದ್ಧಿ ಸಮಿತಿಯಿಂದ ವಿಜೃಂಭಣೆಯಿಂದ ಆಚರಿಸಿದರು.

ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 100ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಹೋರಿಗಳು ಅಖಾಡದಲ್ಲಿ ಮಿಂಚಿನ ಓಟ ಮಾಡಿ ನೋಡುಗರ ಗಮನ ಸೆಳೆದವು. ಹೋರಿ ಹಬ್ಬ ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗೊಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು. ಪೀಪಿ ಹೋರಿಗಳು ಅಖಾಡದಲ್ಲಿ ಬರುತ್ತಿದ್ದಂತೆ ನೆರೆದವರ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದವು.

ಅಖಾಡದಲ್ಲಿ ಗಾಮಾದ ದಂಗೆಯ ಕ್ರಾಂತಿ, ಹುಣಸೆಕಟ್ಟೆ ಜೈ ಹನುಮ, ಸೊರಬದ ರಾವಣ, ಉರುಗನಹಳ್ಳಿ ಗೂಳಿ, ಹಿರೇಜಂಬೂರು, ಕೊಡಕಣಿ ಡೇಂಜರ್ ಬಸವ, ಓಟೂರು ಮಾರಿಕಾಂಬ, ಹಳೇಸೊರಬ ರಾಕಿ ಬಾಯ್, ಓಟೂರು ಗೂಳಿ, ಬನವಾಸಿ ಕದಂಬ, ಸಾರೇಮರೂರು ಸರದಾರ, ಕುರದುರೆಗಣಿ ಗ್ರಾಮದ ಅಶ್ವ, ವಾಯುಪುತ್ರ, ವೀರಭದ್ರೇಶ್ವರ ಎಕ್ಸ್‌ಪ್ರೆಸ್, ಮಲೆನಾಡ ಪವರ್ ಸ್ಟಾರ್ ಸೇರಿದಂತೆ ಹಲವು ಹೆಸರಿನ ಹೋರಿಗಳು ಓಡಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಹೋರಿ ಹಬ್ಬ ಆಚರಣಾ ಸಮಿತಿಯ ಪ್ರಮುಖ ಎಚ್ ಎಲ್ ರಾಘವೇಂದ್ರ ಮಾತನಾಡಿ, “ರೈತರ ಜನಪದ ಕ್ರೀಡೆಯಾದ ಹೋರಿ ಹಬ್ಬಕ್ಕೆ ಸರ್ಕಾರದಿಂದ ಪ್ರೋತ್ಸಾಹ ಮತ್ತು ಸಹಕಾರ ದೊರೆಯಬೇಕು. ಬೆಂಗಳೂರಿನಲ್ಲಿ ಕಂಬಳ ಆಯೋಜಿಸಿದಂತೆ ಹೋರಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಉತ್ತೇಜನ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರತೀಯರಿಗೆ ಗೌರವದ ಬದುಕು ನೀಡಿದ ಗ್ರಂಥ ಸಂವಿಧಾನ: ಶಾಕು ಬೋಧಿಧಮ್ಮ

ಹೋರಿ ಹಬ್ಬದ ಆಯೋಜಿಸಿದ್ದ ಕುದುರೆಗಣಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮಾಭಿವೃದ್ಧಿ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೇ ಹೋರಿಯನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ಹರಿಸಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...