ಶಿವಮೊಗ್ಗ | ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು; ಗ್ರಾಮಸ್ಥರ ಪ್ರತಿಭಟನೆ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಹೊಳೆಹೊನ್ನೂರು ಗ್ರಾಮದ ಸರ್ಕಲ್‌ನಲ್ಲಿ ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ರವಿವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿ, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಆರೋಪಿಗಳ ಬಂಧನ ಆಗುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಜರಾತ್‌ ಮಾದರಿಗೆ ಪರ್ಯಾಯ ಮಾದರಿ ಸೃಷ್ಟಿಸುವ ಸಾಮರ್ಥ್ಯ ಕರ್ನಾಟಕಕ್ಕಿದೆ: ಯೋಗೇಂದ್ರ ಯಾದವ್

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದು, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ. ಪೊಲೀಸರ ಭರವಸೆ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ನಡೆದಿರುವ ಅತ್ಯಂತ ಹೇಯ ಕೃತ್ಯ ಇದು ಎಂದು ಕಾಂಗ್ರೆಸ್‌ ಮುಖಂಡ ಉಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...