ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.

ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮಾರ್ಚ್‌ 04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆಂದು ತಿಳಿದುಬಂದಿದೆ.

ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ ಪೊಲೀಸರು, ಆಗುಂಬೆ ಪೊಲೀಸ್ ಠಾಣೆ ಪ್ರಕರಣ ಸಂಬಂಧ ಕೋರ್ಟ್‌ಗೆ ಹಾಜರುಪಡಿಸಿರುವುದಾಗಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಿಲಿಚಾಮುಂಡಿ ದೇವಸ್ಥಾನದ ಭಂಡಾರ ಮನೆ ಧ್ವಂಸ; ಮೂವರ ಬಂಧನ

ಪೊಲೀಸರು ಶ್ರೀಮತಿಯನ್ನು ಹೆಚ್ಚಿನ ಭದ್ರತೆಯಲ್ಲಿ ಕೇರಳದಿಂದ ಶಿವಮೊಗ್ಗ ಜೈಲಿಗೆ ಕರೆ ತಂದಿದ್ದಾರೆ. ನಕ್ಸಲ್ ಹೋರಾಟದಲ್ಲಿ ಬಿ ಜಿ ಕೃಷ್ಣಮೂರ್ತಿ ಜತೆ ಶೃಂಗೇರಿಯ ಶ್ರೀಮತಿ ಗುರುತಿಸಿಕೊಂಡಿದ್ದರು.

2023 ನವೆಂಬರ್ 7 ರಂದು ಶ್ರೀಮತಿಯನ್ನು ಕೇರಳ ಪೊಲೀಸರು ಬಂಧಿಸಿದ್ದರು. ವಿಚಾರಣೆ ಬಳಿಕ ಅವರನ್ನು ತ್ರಿಶೂರ್ ಜೈಲಿನಲ್ಲಿ ಇರಿಸಿದ್ದರು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...