ಶಿವಮೊಗ್ಗ | ಆಸ್ಪತ್ರೆಯ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

Date:

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್(3 ವರ್ಷ) ಆಸ್ಪತ್ರೆಯ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾಗಿದೆ. ಹೆಚ್ಚಿನ‌ ಮಾಹಿತಿಗಾಗಿ ಕಾಯಲಾಗುತ್ತಿದೆ. ತೆರೆದ ನೆಲದ ತೊಟ್ಟಿಯಲ್ಲಿ ಮಗು ಬಿದ್ದು ಸಾವನ್ನಪ್ಪಿದ್ದು, ಈ ಬಗ್ಗೆ ಸಾರ್ವಜನಿಕರ ಆಕ್ಷೇಪ ಕೇಳಿ ಬರುತ್ತಿದೆ.

ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್‌ ಸಂಬಂಧಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಮ್ರಾನ್ ಸಂಬಂಧಿಯನ್ನು ವಿಚಾರಿಸಲು ಕುಟುಂಬದವರ ಜತೆಗೆ ಆಸ್ಪತ್ರೆಗೆ ಆಗಮಿಸಿದ್ದ‌ ಅಯಾನ್ ಆಸ್ಪತ್ರೆ ಒಳಗಡೆಯಿಂದ ಆಟವಾಡುತ್ತ ಹೊರಗೆ ಬಂದು ತೊಟ್ಟಿಗೆ ಬಿದ್ದಿರಬಹುದೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ಹೊಸ ಮತದಾರರ ನೋಂದಣಿಗೆ ಅಗತ್ಯ ಕ್ರಮವಹಿಸಿ : ರಶ್ಮಿ ಮಹೇಶ್

ತೊಟ್ಟಿಯ ಬಳಿ ತೆರಳಿದ್ದ ಮಗು ಭರ್ತಿ ನೀರಿದ್ದ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಮೃತಪಟ್ಟ ನಂತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತೊಟ್ಟಿಗೆ ಮುಚ್ಚುಳ ಮುಚ್ಚದಿದ್ದ ಪರಿಣಾಮ ಆಟವಾಡುತ್ತ ಹೋದ ಹೋದ ಮಗು ತೊಟ್ಟಿಗೆ ಬಿದ್ದಿದ್ದೆ. ಆಸ್ಪತ್ರೆ ಸಿಬ್ಬಂದಿಯವರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಟುಂಬಸ್ಥರ ಆರೋಪ ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...