ಶಿವಮೊಗ್ಗ | ಸಾಗರ ತಾಲೂಕು ಅಧಿಕಾರಿಗಳೊಂದಿಗೆ ಶಾಸಕ ಗೋಪಾಲ ಕೃಷ್ಣರಿಂದ ವಿಡಿಯೋ ಕಾನ್ಫರೆನ್ಸ್‌

Date:

ಶಿವಮೊಗ್ಗ ಜಿಲ್ಲಾ ಸಾಗರ ತಾಲೂಕಿನ ಶಾಸಕರಾದ ಗೋಪಾಲಕೃಷ್ಣ ಬೇಳೂರು ವಿದೇಶದಲ್ಲಿರುವ ಹಿನ್ನೆಲೆಯಲ್ಲಿ ಸಾಗರ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಮಳೆಯಿಂದ ಅನಾಹುತ ಸಂಭವಿಸಿದ ಸ್ಥಳಗಳಿಗೆ ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಅಧಿಕಾರಿಗಳಿಂದ ಮಾಹಿತಿ ಕೂಡ ಪಡೆದುಕೊಂಡರು.

ಸಾಗರ ತಾಲೂಕು ತಹಸೀಲ್ದಾರ್ ಚಂದ್ರಶೇಖರ ನಾಯ್ಕ್ ಮತ್ತು ಸಾಗರ ನಗರಸಭಾ ಕಮಿಷನರ್ ಎಚ್ ಕೆ ನಾಗಪ್ಪ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಕಡೆ ಹೆಚ್ಚಿನ ಗಮನ ನೀಡಲಾಗಿದೆ. ಹಾನಿಗೊಳಗಾದ ಪ್ರತಿಯೊಂದು ಕಡೆ ಹೆಚ್ಚಿನ ನಿಗಾವಹಿಸಲು ಪಿಡಿಓಗಳಿಗೆ ಸೂಚನೆ ನೀಡಲಾಗಿದೆ ಎಂದು ತಾಲೂಕು ಪಂಚಾಯತ್ ಇಒ ಗುರುಕೃಷ್ಣ ಶೆಣೈ ತಿಳಿಸಿದರು.

ಗ್ರಾಮೀಣ ಭಾಗದ ಕುಡಿಯುವ ನೀರು ಮತ್ತು ನೈರ್ಮಲ್ಯದ ಬಗ್ಗೆ ಗಮನವಿಟ್ಡು ಜನತೆಗೆ ತೊಂದರೆ ಆಗದಂತೆ ಕೆಲಸ ಮಾಡಲಾಗಿದೆ ಎಂದು ಇಂಜಿನಿಯರ್ ಭರತ್ ಶಾಸಕರಿಗೆ ಮಾಹಿತಿ ನೀಡಿದರು.

ರಸ್ತೆಗಳು ಮಳೆಯಿಂದ ಹಾನಿಗೊಳಗಾದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮತ್ತು ಸಾಗರ ತಾಲ್ಲೂಕು ಕಚೇರಿ ಮೇಲ್ಛಾವಣಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮಂಜುನಾಥ್ ಸಭೆಯಲ್ಲಿ ತಿಳಿಸಿದರು.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ”ಎಕನಾಮಿಕ್ ಸರ್ವೇ”: ಗಾಳಿ ಬಂದತ್ತ ತೂರಿಕೊಳ್ಳುವ ಪ್ಲಾನ್ ಇರಬಹುದೇ?

ಮಳೆಯಿಂದ ಕೆಲವು ಶಾಲೆಗಳಿಗೆ ಹಾನಿಯಾಗಿದ್ದು, ಅವುಗಳಲ್ಲಿ ಪಾಠ ಮಾಡಲು ಸಾಧ್ಯವಾಗದೇ ಇದ್ದರೆ ಅಂತಹ ಸ್ಥಳದಲ್ಲಿ ಮುಖ್ಯ ಶಿಕ್ಷಕರು ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಾಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್ ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಮೆಸ್ಕಾಂ ಲೈನ್‌ಮೆನ್’ಗಳ ಪರಿಶ್ರಮಕ್ಕೆ ಶಾಸಕ ಗೋಪಾಲ ಕೃಷ್ಣ  ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...