ಶಿವಮೊಗ್ಗ | ವಿಹಂಗಮ ಹಾಲಿಡೇ ರೆಸಾರ್ಟ್ ಒತ್ತುವರಿ ತೆರವು; ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಜಾ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ತೆರವು ಆದೇಶವನ್ನು ಪ್ರಶ್ನಿಸಿ ವಿಹಂಗಮ ಹಾಲಿಡೇ ರೆಸಾರ್ಟ್‌ ಮಾಲೀಕರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ್ದು, ಶಿವಮೊಗ್ಗ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೇಲ್ಮನವಿ ಪ್ರಾಧಿಕಾರಿ ಒತ್ತುವರಿ ತೆರವು ಆದೇಶ ಎತ್ತಿಹಿಡಿದಿದ್ದಾರೆ.

ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ತೆರವು ಆದೇಶವನ್ನು ಪ್ರಶ್ನಿಸಿ ರೆಸಾರ್ಟ್‌ ಮಾಲೀಕರಾದ ಕೆ ಆರ್ ದಯಾನಂದ ಬಿನ್ ಕೆ ಎಸ್ ರಾಮಪ್ಪಗೌಡ ಹಾಗೂ ಕಾನಿನ ಕಡಿದಾಳ್ ಕೆ ಆರ್ ಡಿ ಕಾನಿನ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿಲಾಗಿದೆ.

“ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ತೆರವು ಪ್ರಕರಣದಲ್ಲಿ ಪ್ರಶ್ನಿತ ಭೂಮಿಯು ಭಾರತೀಪುರ ಗ್ರಾಮದ ಭಾರತೀಪುರ ಕಿರು ಅರಣ್ಯದ ಗಡಿಯ ಒಳಗೆ ಇರುತ್ತದೆ ಎಂಬುದನ್ನು ಸಾಬೀತುಪಡಿಸುವಂತಹ ದಾಖಲೆಗಳನ್ನು ಒತ್ತುವರಿ ತೆರವು ಅದೇಶ ಹೊರಡಿಸುವ ಸಂದರ್ಭದಲ್ಲಿ ಪರಿಗಣಿಸಿ ಅರಣ್ಯವೆಂಬುದನ್ನು ಖಚಿತಪಡಿಸಿಕೊಳ್ಳಲಾಗಿರುತ್ತದೆ. ಒತ್ತುವರಿ ತೆರವು ಆದೇಶಕ್ಕೆ ಮುನ್ನ ಆಕ್ಷೇಪಣೆ ಸಲ್ಲಿಸಲು ಮೇಲ್ಮನವಿದಾರರಿಗೆ ಕಾಲವಕಾಶ ನೀಡಲಾಗಿರುತ್ತದೆ. ಅರಣ್ಯ ಸಂರಕ್ಷಣಾಧಿಕಾರಿಗಳ ವಿಚಾರಣೆಯ ವೇಳೆ ಮೇಲ್ಮನವಿದಾರರ ಲಿಖಿತ ಹೇಳಿಕೆಗಳಲ್ಲಿ ಮೇಲ್ಮನವಿದಾರರ ಅನುಭವದಲ್ಲಿರುವ 6ಎಕರೆ 30ಗುಂಟೆ ಒತ್ತುವರಿ ಭೂಮಿಗೆ ಯಾವುದೇ ಭೂ ಮಂಜೂರಾತಿ ದಾಖಲೆಗಳಿಲ್ಲವೆಂದು ಲಿಖಿತ ಹೇಳಿಕೆ ಸಲ್ಲಿಸಿರುತ್ತಾರೆ. ನಂತರದಲ್ಲಿಯೂ ಈ 6 ಎಕರೆ 30 ಗುಂಟೆ ಪ್ರದೇಶವು ಅರಣ್ಯವಲ್ಲವೆಂಬುದಕ್ಕೆ ಯಾವುದೇ ದಾಖಲೆ ಸಲ್ಲಿಸಿರುವುದಿಲ್ಲ. ಈ ಎಲ್ಲ ಅಂಶಗಳ ಹಿನ್ನಲೆಯಲ್ಲಿ ಈ ಪ್ರಕರಣದ ಮೇಲ್ಮನವಿಯಲ್ಲಿ ಪ್ರಶ್ನಿಸಲ್ಪಟ್ಟ ಒತ್ತುವರಿ ತೆರವು ಆದೇಶವು ಸಂಪೂರ್ಣವಾಗಿ ಊರ್ಜಿತವಾಗುತ್ತದೆ” ಎಂದು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿಯಾಗಿದೆಯೆಂದು ಆಗ್ರಹಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೈಜ ಹೋರಾಟಗಾರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರು ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ಅದರಂತೆ ಈ ದಿನ.ಕಾಮ್‌ ಇದರ ಕುರಿತು ಸುದೀರ್ಘ ವರದಿ ಮಾಡಿತ್ತು. ತೀರ್ಥಹಳ್ಳಿ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಒತ್ತುವರಿ ತೆರವು ಆದೇಶ ಹೊರಡಿಸಿದ್ದರು.

ಇದನ್ನೂ ಓದಿದ್ದೀರಾ? ಈ ದಿನ ಇಂಪ್ಯಾಕ್ಟ್ | ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಆರೋಪ; ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ

ಒತ್ತುವರಿ ತೆರವು ಆದೇಶವನ್ನು ಪ್ರಶ್ನಿಸಿ ಕೆ ಆರ್ ದಯಾನಂದ ಬಿನ್ ಕೆ ಎಸ್ ರಾಮಪ್ಪಗೌಡ ಹಾಗೂ ಕಾನಿನ ಕಡಿದಾಳ್@ ಕೆ ಆರ್ ಡಿ ಕಾನಿನ್ ಅವರು ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಮೇಲ್ಮನವಿ ಪ್ರಾಧಿಕಾರಿ ದೂರುದಾರರ ಮೇಲ್ಮನವಿಯನ್ನು ವಜಾಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...