ಶಿವಮೊಗ್ಗ | ಕಾಂಗ್ರೆಸ್ ಸದಸ್ಯೆ ಲಲಿತಮ್ಮಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್

Date:

ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ ಉಪಾಧ್ಯಕ್ಷರಿಲ್ಲ. ಈಗ ಅಧ್ಯಕ್ಷ‌ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ ಮೀಸಲಾತಿ ಹೊರಡಿಸಿ ಸರ್ಕಾರ ಆದೇಶಿಸಿತ್ತು.

“ಮೀಸಲಾತಿಯನ್ನು ಪ್ರಶ್ನಿಸಿ ಕಾಂಗ್ರೆಸ್ ಸದಸ್ಯೆ ಲಲಿತಮ್ಮ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಇದನ್ನು ನಗರಸಭೆ ಸಭೆಯಲ್ಲಿ ಪ್ರಶ್ನಿಸಿದಾಗ, ʼಕಾಂಗ್ರೆಸ್ ಹಿತಾಸಕ್ತಿಯಿಂದ ತಡೆಯಾಜ್ಞೆ ತರಲಾಗಿತ್ತ ಅಥವಾ ಲಲಿತಮ್ಮನವರ ಸ್ವಇಚ್ಛೆಯಿಂದ ತಂದಿದ್ದʼ ಎಂದು ಕೇಳಿದ್ದೆ. ಕಾಂಗ್ರೆಸ್ ಪಕ್ಷ ಲಲಿತಮ್ಮರ ಸ್ವಇಚ್ಛೆಯೆಂದು ಹೇಳಿತ್ತು. ನಗರ ಸಭೆಯ ಕಾಯ್ದೆ ಪ್ರಕಾರ‌ ತಡೆಯಾಜ್ಞೆ ತಂದವರು ಸಭೆಗೆ ಭಾಗಿಯಾಗುವಂತಿಲ್ಲವೆಂಬ ಕಾನೂನು ಇದೆ. ಆದರೆ ಲಲಿತಮ್ಮ ಸಭೆಗೆ ಭಾಗಿಯಾಗಿ ನಮ್ಮ ವಿರುದ್ಧವೇ ಆರೋಪಿಸಿದರು” ಎಂದು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆ ಬೃಹತ್ ಪ್ರತಿಭಟನೆ

“ತಡೆಯಾಜ್ಞೆ ತಂದು ಅಪರಾಧಿಯಾಗಿದ್ದೀರೆಂದು ಹೇಳಿದ್ದು ಸತ್ಯ. ಆದರೆ ಅದರ ಉದ್ದೇಶ ಅವರನ್ನು ನಿಂದಿಸುವುದಾಗಿರಲಿಲ್ಲ. ಅದರ ಹಿಂದಿನ ಉದ್ದೇಶ ಮಹಿಳೆಯ ಸಬಲೀಕರಣಕ್ಕೆ ತಡೆಯಾಜ್ಞೆ ತರಲಾಗಿದೆಯೆಂಬ ಉದ್ದೇಶವಿತ್ತು. ಪೂರ್ವಾಗ್ರಹ ಪೀಡಿತ ಅಂಶ ನನ್ನ ಹೇಳಿಕೆ ಹಿಂದಿರಲಿಲ್ಲ” ಎಂದು ಹೇಳಿದ್ದಾರೆ.

“ಆದರೂ ನಾನು, ಗಣೇಶ್ ಪ್ರಸಾದ್, ಮಧುರಾ ಶಿವಾನಂದ್ ಮತ್ತು ಮಹೇಶ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ಅವರ ಮನಸ್ಸಿಗೆ ನೋವಾಗಿದ್ದರೆ, ನಾನು ಸೇರಿ ನಾಲ್ವರು ಕ್ಷಮೆಯಾಚಿಸಿದ್ದೇವೆ” ಎಂದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...