ಶಿವಮೊಗ್ಗ | ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ: ಗೀತಾ ಶಿವರಾಜ್‌ಕುಮಾರ್

Date:

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು‌.

ಜಿಲ್ಲೆಯ ಶಿಕಾರಿಪುರ ತಾಲೂಕಿನ ತೋಗರ್ಸಿ, ಹರಗಿ, ಚಿಕ್ಕ ಮಾಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಗರ್ಸಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ನಡೆದ ಮತಯಾಚನೆ ಸಭೆಯಲ್ಲಿ ಮಾತನಾಡಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕನಸು ನನಸಾಗಿದೆ” ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರಿಗೆ ತಾಲೂಕಿನ ಜನಪ್ರೀತಿಯಿಂದ ಕಾಣುತ್ತಿದ್ದರು‌. ಅವರ ಜನಪರ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ನನಗೂ ಅವಕಾಶ ಕಲ್ಪಿಸಿಕೊಡಿ” ಎಂದು ಕೋರಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ‌ ಎಸ್ ಯಡಿಯೂರಪ್ಪ ಅವರ ಕಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ‌. ಕಳೆದ 40 ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದೇ ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ” ಎಂದು ವ್ಯಂಗ್ಯವಾಡಿದರು.

“ಇಲ್ಲಿನ ಕುಟುಂಬ ರಾಜಕಾರಣದ ಪಿತೂರಿಗೆ ಮುಂದಿನ ದಿನದಲ್ಲಿ ಯಡಿಯೂರಪ್ಪ ಅವರ ಮೊಮ್ಮಕ್ಕಳೂ ಕೂಡಾ ಇಲ್ಲಿಯೇ ಚುನಾವಣೆಗೆ ಸ್ಪರ್ಧಿಸುತ್ತಾರೆ. ಅವರ ಕುಟುಂಬ ಹೊರತುಪಡಿಸಿ ಚುನಾವಣೆ ಸ್ಪರ್ಧೆಗೆ ಯಾರಿಗೂ ಅವಕಾಶವಿಲ್ಲ. ಎರಡು ತಲೆಮಾರಿನಿಂದ ಈ ಭಾಗದಲ್ಲಿ ಯಡಿಯೂರಪ್ಪ ಅವರು ಅಧಿಕಾರ ಹಿಡಿದ್ದಾರೆ. ಬೇರೆ ಯಾರೂ ಇಲ್ಲಿ ನಾಯಕರಿಲ್ಲವೆ” ಎಂದು ಪ್ರಶ್ನಿಸಿದರು.

“ರಾಮಾಯಣದಲ್ಲಿ ತಂದೆಯ(ದಶರಥ) ಮಾತು ಉಳಿಸಲು ಅಧಿಕಾರ ತೊರೆದು ರಾಮ ಕಾಡಿಗೆ ಹೋದ. ಆದರೆ, ಇಲ್ಲಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಸಾಲು- ಸಾಲು ಆರೋಪಗಳು ಕೇಳಿದ್ದವು. ಇಲ್ಲಿ ತಂದೆಯ ಮರ್ಯಾದೆ ಉಳಿಸಲು ಮಕ್ಕಳು ಏನು ಮಾಡಿದರು?. ತಂದೆಯ ಆಸ್ತಿ, ಅಧಿಕಾರದ ಆಸೆಗೆ ಯಡಿಯೂರಪ್ಪ ಅವರನ್ನು ಮಕ್ಕಳು ಎಲ್ಲಿಗೆ ಕಳುಹಿಸಿದರೆಂದು ಜನರೇ ಹೇಳುತ್ತಿದ್ದಾರೆ. ಆದ್ದರಿಂದ, ಸಂಸದ ರಾಘವೇಂದ್ರ ರಾಮನ ಹೆಸರು ಹೇಳಿಕೊಂಡು ಮತ ಕೇಳಲು ಅರ್ಹತೆ ಕಳೆದುಕೊಂಡಿದ್ದಾರೆ” ಎಂದು ಆಯನೂರು ಮಂಜುನಾಥ್ ಗುಡುಗಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಪಿ ನಾಗರಾಜ್ ಗೌಡ ಮಾತನಾಡಿ, “ಬಗರ್ ಹುಕುಂ ಸಮಸ್ಯೆ ಸೇರಿದಂತೆ ಅನೇಕ ಬಗೆಹರಿಸಬಹುದಾದ ಸವಾಲುಗಳು ಇಲ್ಲಿವೆ. ಆದರೆ, ಸಂಸದ ಬಿ ವೈ‌ ರಾಘವೇಂದ್ರ ಅವರು ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಕಳೆದ 15 ವರ್ಷದಿಂದ ಇಲ್ಲಿ ಸಂಸದರಾಗಿ ಆಡಳಿತ ನಡೆಸುತ್ತಿದ್ದಾರೆ. ಆದರೆ, ರೈತಾಪಿ ವರ್ಗಕ್ಕೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ” ಎಂದು ದೂರಿದರು.

“ಶಿಕಾರಿಪುರ ತಾಲೂಕಿನ ಅತಿ ಹೆಚ್ಚು ರೈತರ ಕೃಷಿ ಪಂಪ್‌ಸೆಟ್ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಅವರು ಉಚಿತ ವಿದ್ಯುತ್ ನೀಡುವ ಮೂಲಕ ರೈತಾಪಿ ವರ್ಗಗಳಿಗೆ ನೆರವಾಗಿದ್ದರು. ಆದರೆ, ಸಂಸದ ರಾಘವೇಂದ್ರ ಅವರು ಈ ರೀತಿಯ ಯಾವುದೇ ಯೋಜನೆಯನ್ನು ಇಲ್ಲಿ ಅನುಷ್ಠಾನಕ್ಕೆ ತರಲಿಲ್ಲ” ಎಂದರು.

ಸ್ಥಳೀಯ ನಿವಾಸಿಗಳಾದ ಚಂದ್ರಪ್ಪ, ತೋಗರ್ಸಿ ಮಾತನಾಡಿ, “ದಶಕಗಳಿಂದ ಬಿಜೆಪಿಗೆ ಬೆಂಬಲಿಸುತ್ತಾ ಬಂದಿದ್ದೇವೆ. ಆದರೆ, ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದೆ. ಮಹಿಳೆಯರು ಗ್ಯಾರಂಟಿ ಯೋಜನೆಗಳ ಪ್ರತಿಫಲ ಪಡೆಯುತ್ತಿದ್ದಾರೆ‌. ಹಾಗಾಗಿ ಸಹೋದರಿ ಗೀತಾಗೆ ಮತ ಹಾಕಲು ಮಹಿಳೆಯರು ಒಲವು ತೋರುತ್ತಿದ್ದಾರೆ. ಈ ಬಗ್ಗೆ ಮನೆಯ ಮಹಿಳಾ ಸದಸ್ಯರಿಂದಲೇ ವಾದ ನಡೆಯುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್,
ಕೆಪಿಸಿಸಿ ಸದಸ್ಯ ಗೋಣಿ ಮಹಲ್ತೇಶ್, ನಗರದ ಮಹದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಪುಷ್ಪ ಶಿವಕುಮಾರ್, ಧೀರರಾಜ ಹೊನ್ನವಿಲೆ, ಬಲ್ಕೀಷ್ ಭಾನು, ಭಂಡಾರಿ ಮಾಲತೇಶ್, ವೈ ಎಚ್ ನಾಗರಾಜ್, ಪ್ರವೀಣ್, ಚೇತನ್ ಇದ್ದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...