ಶಿವಮೊಗ್ಗದಲ್ಲಿ ಝೀಕಾ ವೈರಸ್‌ಗೆ ಮೊದಲ ಬಲಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್‌ನಿಂದ ವ್ಯಕ್ತಿಯೋರ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇದು ರಾಜ್ಯದಲ್ಲಿನ ಮೊದಲ ಪ್ರಕರಣವಾಗಿದೆ.

ಶಿವಮೊಗ್ಗ ನಗರದ ಗಾಂಧಿನಗರದ ನಿವಾಸಿ 74 ವರ್ಷದ ವ್ಯಕ್ತಿ ಶುಕ್ರವಾರ ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಜೂ.19ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಜೂ. 21ರಂದು ಪರೀಕ್ಷಿಸಿದಾಗ ಝೀಕಾ ಸೋಂಕು ಇರುವುದು ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ರಾಷ್ಟ್ರೀಯ ರೋಗ ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಸಂಸ್ಥೆಗೆ ರಕ್ತದ ಮಾದರಿಯನ್ನು ಕಳಿಸಿದ್ದು, ಅಲ್ಲಿಯೂ ಝೀಕಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.

ಇದನ್ನು ಓದಿದ್ದೀರಾ? ತುಮಕೂರು | ಯಾವ ಜೀವಿಯನ್ನೂ ದ್ವೇಷಮಾಡುವ ಹಕ್ಕು ಯಾರಿಗೂ ಇಲ್ಲ : ನಿಕೇತ್ ರಾಜ್ ಮೌರ್ಯ

ಗುರುವಾರ ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿಸಿಕೊಂಡು ಮನೆಗೆ ಕರೆದೊಯ್ದಿದ್ದರು. ಶುಕ್ರವಾರ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ವ್ಯಕ್ತಿ, ಜ್ವರ ಮಾತ್ರವಲ್ಲದೆ ವಿವಿಧ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ವರದಿಯಾಗಿದೆ.

ಈ ಕುರಿತು ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್ ಸ್ಪಷ್ಟನೆ ನೀಡಿದ್ದು, “ಕೇವಲ ಝೀಕಾ ವೈರಸ್‌ನಿಂದ ವ್ಯಕ್ತಿ ಸಾಯಲು ಸಾಧ್ಯವಿಲ್ಲ. ನಿನ್ನೆ ಮೃತಪಟ್ಟಿರುವ 74 ವರ್ಷದ ವ್ಯಕ್ತಿ, ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದರು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...