ಶಿರಸಿ | ಅರಣ್ಯ ಹಕ್ಕು ಪಡೆಯಲು ‘ಎರಡು ದಾಖಲೆ’ ಕಡ್ಡಾಯ – ಶಾಸಕ ಶಿವರಾಮ ಹೆಬ್ಬಾರ್ ಪ್ರಶ್ನೆಗೆ ಸಚಿವ ಈಶ್ವರ್ ಖಂಡ್ರೆ ಲಿಖಿತ ಸ್ಪಷ್ಟನೆ

Date:

ಶಿರಸಿ: ಅರಣ್ಯ ಹಕ್ಕು ಕಾಯ್ದೆ–2005ರಡಿ ಅರಣ್ಯ ಹಕ್ಕು ಮಂಜೂರು ಮಾಡಲು, ಸಾಂಪ್ರದಾಯಿಕ ಪದ್ಧತಿ–ಸಂಪ್ರದಾಯ, ಪವಿತ್ರ ಸ್ಥಳಗಳು ಹಾಗೂ ಭೌತಿಕ ಗುಣಲಕ್ಷಣಗಳಿಗೆ ಸಂಬಂಧಿಸಿದ ಕನಿಷ್ಠ ಎರಡು ಪುರಾವೆಗಳನ್ನು ಸಾಕ್ಷ್ಯವೆಂದು ಪರಿಗಣಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೇ ವಿಧಾನಸಭೆಯಲ್ಲಿ ಲಿಖಿತವಾಗಿ ತಿಳಿಸಿದ್ದಾರೆ. ಈ ಮಾಹಿತಿಯನ್ನು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸದಸ್ಯರು ಹಾಗೂ ಮಾಜಿ ಸಚಿವರಾದ ಅರೇಬೈಲ್ ಶಿವರಾಮ ಹೆಬ್ಬಾರ್ ಅವರು ನಿಯಮ 73 ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆಯುವ ಸೂಚನೆ ಮಂಡಿಸಿದ್ದರು.

2005ರ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿರುವ ಲಕ್ಷಾಂತರ ಅರಣ್ಯ ಹಕ್ಕುದಾರರು ಕೆಲವು ನಿಬಂಧನೆಗಳು ಮತ್ತು ಅಧಿಕಾರಿಗಳ ತಿಳುವಳಿಕೆ ಕೊರತೆಯಿಂದ ಹಕ್ಕು ಮಂಜೂರಾತಿ ಪಡೆಯಲು ತೊಂದರೆ ಅನುಭವಿಸುತ್ತಿರುವ ಬಗ್ಗೆ ಅವರು ಸರ್ಕಾರದ ಗಮನ ಸೆಳೆದಿದ್ದರು. ಹೆಬ್ಬಾರ್ ಅವರ ಈ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಸಚಿವರು, ಅರಣ್ಯ ಹಕ್ಕು ಕಾಯ್ದೆಯಲ್ಲಿನ ಪ್ರಮುಖ ಅಂಶಗಳನ್ನು ವಿವರವಾಗಿ ಪ್ರಸ್ತುತಪಡಿಸಿದ್ದಾರೆ ಎಂದು ರವೀಂದ್ರ ನಾಯ್ಕ ಅವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000368974

ಲಿಖಿತ ಉತ್ತರದಲ್ಲಿ ಪ್ರಸ್ತಾಪಿಸಲಾದ ಅಂಶಗಳ ಪ್ರಕಾರ, ಗ್ರಾಮ ಸಭೆಯಿಂದ ರಚಿಸಲ್ಪಟ್ಟ ಅರಣ್ಯ ಕ್ಲೇಮುಗಳನ್ನು ಕ್ಷೇತ್ರಕ್ಕೆ ಭೇಟಿ ನೀಡಿ, ಕ್ಲೇಮುಗಳ ಸ್ವರೂಪ, ವ್ಯಾಪ್ತಿ ಮತ್ತು ಪುರಾವೆಗಳನ್ನು ಭೌತಿಕವಾಗಿ ಪರಿಶೀಲಿಸಿ, ಗ್ರಾಮ ಸಭೆಯ ನಿರ್ಣಯವನ್ನು ಅಂಗೀಕರಿಸತಕ್ಕದ್ದು. ಇದರೊಂದಿಗೆ, ಸಾಗುವಳಿ ಕ್ಷೇತ್ರದ ಹಕ್ಕಿಗೆ ಭೌತಿಕ ಆಧಾರವು ಮಹತ್ವ ಎಂದು ಉತ್ತರದಲ್ಲಿ ಉಲ್ಲೇಖಿಸಲಾಗಿದೆ.

ಜನ ವಸತಿ ಮತ್ತು ಸಾಗುವಳಿ ಕ್ಷೇತ್ರದ ಪುರಾವೆಗೆ ಸಂಬಂಧಿಸಿದಂತೆ ಪರಿಗಣಿಸಲಾಗುವ ಸಾಕ್ಷ್ಯಗಳ ಪಟ್ಟಿಯನ್ನು ಅರಣ್ಯ ಸಚಿವರು ತಮ್ಮ ಉತ್ತರದಲ್ಲಿ ಉಲ್ಲೇಖಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ, ಪುರಾತನ ಕಾಲದ ಬಾವಿಗಳು, ಸಮಾಧಿ ಸ್ಥಳಗಳು, ಪವಿತ್ರ ಸ್ಥಳಗಳಂತಹ ಪ್ರಾಚೀನತೆಯನ್ನು ಸ್ಥಾಪಿಸುವ ಸಾಂಪ್ರದಾಯಿಕ ರಚನೆಗಳು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಬೆಂಗಳೂರು ತ್ಯಜಿಸಿ ಬಂದ ಸುಭಾಸ್‌ಚಂದ್ರ ನಾಯ್ಕ್‌ಗೆ ನರೇಗಾ ಕೈ ಹಿಡಿತು: ಕುರಿ ಸಾಕಾಣಿಕೆಯಲ್ಲಿ ಲಕ್ಷಗಳ ಆದಾಯ!

ಮನೆ, ಗುಡಿಸಲುಗಳು, ನೆಲಸಮಗೊಳಿಸುವಿಕೆ, ಕಟ್ಟೆಗಳು, ಚೆಕ್ ಡ್ಯಾಮ್‌ಗಳು ಮತ್ತು ಮುಂತಾದವುಗಳಂತಹ ಭೂಮಿಗೆ ಮಾಡಿದ ಶಾಶ್ವತ ಸುಧಾರಣೆಗಳು. ಈ ಭೌತಿಕ ಗುಣಲಕ್ಷಣಗಳನ್ನು ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಸಾಕ್ಷ್ಯಗಳನ್ನಾಗಿ ಪರಿಗಣಿಸಲಾಗುವುದೆಂದು ಸಚಿವರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ನೀಡಿದ ಲಿಖಿತ ಉತ್ತರದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...