ಶಿರೂರು ಗುಡ್ಡ ಕುಸಿತ | 10ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ; ಪತ್ತೆಯಾದ ಟ್ರಕ್ ಮೇಲೆತ್ತಲು ಸಕಲ ಸಿದ್ಧತೆ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ನಡೆಸಲಾಗುತ್ತಿದ್ದ ಶೋಧ ಕಾರ್ಯಾಚರಣೆಯನ್ನು 10ನೇ ದಿನವೂ ಮುಂದುವರಿಸಲಾಗಿದೆ.

ಈಗಾಗಲೇ ನದಿಯ ಒಳಗಡೆ ಪತ್ತೆಯಾಗಿರುವ ಟ್ರಕ್ ಅನ್ನು ಮೇಲೆತ್ತಲು ಸೇನೆಯ ಅಧಿಕಾರಿಗಳು ಸಕಲ ಸಿದ್ಧತೆ ನಡೆಸಿಕೊಂಡಿದ್ದಾರೆ. ಮಲಯಾಳಿಯೂ ಆಗಿರುವ ಆರ್. ಮೇಜರ್ ಜನರಲ್ ಎಂ ಇಂದ್ರಬಾಲನ್ ಅವರ ನೇತೃತ್ವದಲ್ಲಿ ಇಂದಿನ ಕಾರ್ಯಾಚರಣೆಯನ್ನು ಗುರುವಾರ ಬೆಳಗ್ಗೆ 7.30ಕ್ಕೆ ಆರಂಭಿಸಲಾಗಿದೆ.

ಒಂದು ವೇಳೆ ನಾಪತ್ತೆಯಾಗಿರುವ  ಚಾಲಕ ಅರ್ಜುನ್ ಸೇರಿದಂತೆ ಇತರೆ ಮೂವರ ಶವ ಇಂದು ದೊರೆತಲ್ಲಿ, ಇಂದಿಗೆ ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

arjun

ಶಿರೂರು ಭೂಕುಸಿತದಲ್ಲಿ ಸಿಲುಕಿರುವವರ ಹುಡುಕಾಟಕ್ಕೆ ಬೂಮ್ ಎಕ್ಸ್‌ಕಾವೇಟರ್ ಅಥವಾ ಬೂಮ್ ಪೊಕ್ಲೇನ್ ಯಂತ್ರವನ್ನು ಬೆಳಗಾವಿಯಿಂದ ಬುಧವಾರ ತರಿಸಲಾಗಿತ್ತು. ಬೂಮ್ ಪೊಕ್ಲೇನ್ ಯಂತ್ರವು ಶಿರೂರಿಗೆ ತಂದ ದಿನವೇ ನೀರಿನಲ್ಲಿ ಟ್ರಕ್ ಇರುವುದನ್ನು ಭಾರತೀಯ ವಾಯುಸೇನೆಯು ಸೋಲಾರ್ ತಂತ್ರಾಜ್ಞಾನದ ಮೂಲಕ ಪತ್ತೆ ಹಚ್ಚಿತ್ತು. ಅಲ್ಲದೇ, ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿಕೊಂಡಿರುವ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಕೂಡ ಮಾಹಿತಿ ಹಂಚಿಕೊಂಡಿದ್ದರು.

ನೌಕಾಪಡೆಯ ಮುಳುಗು ತಜ್ಞರು ಲಾರಿ ಚಾಲಕ, ಕೇರಳದ ಕೋಝಿಕ್ಕೋಡ್‌ನ ಅರ್ಜುನ್ ಅವರನ್ನು ಹುಡುಕಲು ಗಂಗಾವಳಿ ನದಿಯ ಆಳಕ್ಕೆ ಧುಮುಕಲಿದ್ದಾರೆ. ಲಾರಿ ಎತ್ತಲು ನದಿಯಲ್ಲಿ ವಿಶೇಷ ಫ್ಲ್ಯಾಟ್‌ಫಾರಂ ಅನ್ನು ಅಳವಡಿಸಲು ನಿರ್ಧರಿಸಲಾಗಿದೆ. ಲಾರಿಯು ದಡದಿಂದ 30 ಮೀಟರ್ ದೂರದಲ್ಲಿ 15 ಅಡಿ ಆಳದಲ್ಲಿ ಪತ್ತೆಯಾಗಿತ್ತು.

WhatsApp Image 2024 07 24 at 4.10.31 PM
ಸೋನಾರ್ ತಂತ್ರಜ್ಞಾನದ ಮೂಲಕ ಭಾರತೀಯ ವಾಯುಸೇನೆ ಪತ್ತೆ ಹಚ್ಚಿರುವ ಸಿಗ್ನಲ್‌

ನದಿಯಲ್ಲಿ ಟ್ರಕ್ ತಲೆಕೆಳಗಾಗಿ ಬಿದ್ದಿರುವುದಾಗಿ ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇಂದು ತಪಾಸಣೆಗೆ ಅತ್ಯಾಧುನಿಕ ಡ್ರೋನ್‌ಗಳು ದೆಹಲಿಯಿಂದ ಶಿರೂರಿಗೆ ತಲುಪಿರುವುದಾಗಿ ಮಾಹಿತಿ ದೊರಕಿದೆ. ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಭಾರೀ ಗಾಳಿ ಮತ್ತು ಮಳೆ ಹಾಗೂ ಭೂಕುಸಿತದ ಆತಂಕದಿಂದ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಭಾರೀ ಮಳೆಯಿಂದಾಗಿ ಶಿರೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವರದಿಗಳ ಪುಕಾರ ಶಿರೂರಿನಲ್ಲಿ 20 ವರ್ಷಗಳಲ್ಲೇ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ.

ಕಾರ್ಯಾಚರಣೆ ಹೇಗೆ?

ಲಾರಿ ಎಲ್ಲಿದೆ ಎಂಬುದು ದೃಢಪಟ್ಟಿರುವುದರಿಂದ 10ನೇ ದಿನದ ರಕ್ಷಣಾ ಕಾರ್ಯಾಚರಣೆ ನಿರ್ಣಾಯಕವಾಗಲಿದೆ. ಲಾರಿಯೊಳಗೆ ಅರ್ಜುನ್ ಇದ್ದಾನಾ ಎಂಬುದು ಮೊದಲ ಪರಿಶೀಲನೆಯಾಗಲಿದೆ. ಇದಕ್ಕಾಗಿ ನೌಕಾಪಡೆಯ ಮುಳುಗು ತಜ್ಞರು ಮೊದಲು ನೀರಿನೊಳಗೆ ಇಳಿದು, ಅರ್ಜುನ್ ಕ್ಯಾಬಿನ್‌ನಲ್ಲಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚುವ ಪ್ರಯತ್ನ ಮಾಡಲಾಗುವುದು. ಇದಾದ ಬಳಿಕ ಲಾರಿಯನ್ನು ಹೊರತರಲು ಪ್ರಯತ್ನಿಸಲಾಗುವುದು ಎಂದು ಆರ್. ಮೇಜರ್ ಜನರಲ್ ಎಂ ಇಂದ್ರಬಾಲನ್ ಮಾಹಿತಿ ನೀಡಿದ್ದಾರೆ.

shirro
ಫೋಟೋ ಕೃಪೆ: www.mediaoneonline.com

ಹವಾಮಾನವು ಅನುಕೂಲಕರವಾಗಿದ್ದರೆ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಬಹುದು ಎಂದು ಅಂದಾಜಿಸಲಾಗಿದೆ. ಅತ್ಯಾಧುನಿಕ ಡ್ರೋನ್‌ಗಳು ಈಗಾಗಲೇ ತಲುಪಿದ್ದರೂ, ಅದರ ಬ್ಯಾಟರಿಗಳು ಇನ್ನೂ ತಲುಪಿಲ್ಲ. ಈಗಾಗಲೇ ದೆಹಲಿಯಿಂದ ರೈಲಿನ ಮೂಲಕ ತರಿಸಲಾಗುತ್ತಿದ್ದು, ಬೆಳಗ್ಗೆ 10ರ ಸುಮಾರಿಗೆ ಶಿರೂರಿನ ಘಟನಾ ಸ್ಥಳಕ್ಕೆ ತಲುಪಲಿದೆ ಎಂದು ವರದಿಯಾಗಿದೆ.

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧ: ಕಾರಣ ಏನು?

ಅತ್ಯಾಧುನಿಕ ಡ್ರೋನ್‌ಗಳು ಇಂದು ಕಾರ್ಯಾಚರಣೆ ನಡೆಸಲಿರುವುದರಿಂದ ಅದರ ಫ್ರೀಕ್ವೆನ್ಸಿಗೆ ಯಾವುದೇ ತೊಂದರೆ ಉಂಟಾಗಬಾರದೆಂಬ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬುಧವಾರ ಸಂಜೆಯೇ ಕೇರಳ, ಕರ್ನಾಟಕ ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗಿದೆ.

ಇದನ್ನು ಓದಿದ್ದೀರಾ? ದೇವನಹಳ್ಳಿ ಕೆಐಎಡಿಬಿ ಭೂಸ್ವಾಧೀನ: ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವರೇ ಸಿದ್ದರಾಮಯ್ಯ?

ಕಾರ್ಯಾಚರಣೆಯ ಪ್ರತಿಯೊಂದು ಮಾಹಿತಿಯನ್ನು ನೀಡಲು ಅಂಕೋಲಾ ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಶಾಸಕ ಸತೀಶ್ ಸೈಲ್ ವ್ಯವಸ್ಥೆ ಮಾಡಿದ್ದಾರೆ. ಹೀಗಾಗಿ, ಬೆಳಗ್ಗೆ 8 ಗಂಟೆಯ ನಂತರ ಯಾವುದೇ ಮಾಧ್ಯಮ ಪ್ರತಿನಿಧಿಗಳು ಕಾರ್ಯಾಚರಣೆಯ ಸ್ಥಳದಲ್ಲಿ ಇರಬಾರದು ಎಂದು ಉತ್ತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಈಗಾಗಲೇ ಸೂಚನೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...