ಶಿರೂರು ಗುಡ್ಡ ಕುಸಿತ ದುರಂತ : ಮನೆ ಕಳೆದುಕೊಂಡವರಿಗೆ ಹೆಚ್‌ಆರ್‌ಎಸ್‌ನಿಂದ ಪರಿಹಾರ ಕಾರ್ಯ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ನಡೆಸಲಾಗುತ್ತಿದ್ದ ಶೋಧ ಕಾರ್ಯಾಚರಣೆ 10ನೇ ದಿನವೂ ಮುಂದುವರಿಸಲಾಗಿದೆ.

ಈ ಘಟನೆಯಲ್ಲಿ ಉಳುವರೆ ಗ್ರಾಮದ ಹಲವು ಮನೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದವು. ಇದರಿಂದಾಗಿ ಹಲವು ಕುಟುಂಬಗಳು ಸಂತ್ರಸ್ಥರಾಗಿದ್ದಾರೆ. ಉಳುವರೆ ಗ್ರಾಮದ ಆರು ಮನೆಗಳು ಸಂಪೂರ್ಣ ನಾಶವಾದರೆ, ಸುಮಾರು 21 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ಘಟನೆ ನಡೆದ ಉಳುವರೆ ಗ್ರಾಮಕ್ಕೆ ಭೇಟಿ ನೀಡಿರುವ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (HRS)ಯ ಕಾರ್ಯಕರ್ತರು ಪರಿಹಾರ ಕಾರ್ಯ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಹಂತದಲ್ಲಿ ಸರ್ವೆ ಕಾರ್ಯ ನೆರವೇರಿಸಿದ್ದ ಹೆಚ್‌ಆರ್‌ಎಸ್‌ ಕಾರ್ಯಕರ್ತರು, ಅರ್ಹರಿಗೆ ಬೇಕಾದ ಅಗತ್ಯ ನೆರವನ್ನು ನೀಡುವಲ್ಲಿ ಶ್ರಮಿಸುತ್ತಿದ್ದಾರೆ. ರೈನ್ ಕೋಟ್, ಸ್ಟೌವ್, ರೇಷನ್ ಮುಂತಾದ ಅಗತ್ಯ ವಸ್ತುಗಳನ್ನು ಅರ್ಹರಿಗೆ ವಿತರಿಸಿದ್ದಾರೆ‌. ಹೆಚ್‌ಆರ್‌ಎಸ್‌ನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಕಾರ್ಯಕರ್ತರು ಈ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

HRS 5

ಪರಿಹಾರ ಕಾರ್ಯದಲ್ಲಿ ತೊಡಗಿರುವ ಹೆಚ್‌ಆರ್‌ಎಸ್‌ ಸಂಘಟನೆಯ ರಾಜ್ಯ ಕ್ಯಾಪ್ಟನ್ ಆಗಿರುವ ಅಮೀರ್ ಸಿದ್ದೀಕ್ ಕುದ್ರೋಳಿ ಈ ದಿನ.ಕಾಮ್ ಜೊತೆಗೆ ಮಾತನಾಡಿದ್ದು, “ಎಲ್ಲರೂ ಈಗ ಲಾರಿ ಚಾಲಕ ಅರ್ಜುನ್ ಹಾಗೂ ಇತರರು ಸಿಗಲೆಂದು ಪ್ರಾರ್ಥನೆ ಮಾಡುವಲ್ಲಿ ನಿರತರಾಗಿದ್ದಾರೆ. ಅವರು ಬದುಕಿದ್ದಾರೋ, ಇಲ್ಲವೋ ಎಂದು ಯಾರಿಗೂ ತಿಳಿದಿಲ್ಲ. ಆದರೆ, ಘಟನೆಯಿಂದ ಉಳುವರೆ ಗ್ರಾಮದ ಹಲವು ಮನೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದು ಕೂಡ ಎಲ್ಲರಿಗೂ ತಿಳಿದಿದೆ. ಇದರಲ್ಲಿ ಬದುಕುಳಿದವರು ತಮ್ಮ ಮನೆ ಕಳೆದುಕೊಂಡು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಬಗ್ಗೆಯೂ ಎಲ್ಲ ಮಾಧ್ಯಮಗಳು ವರದಿ ಮಾಡಬೇಕಿದೆ. ಸರ್ಕಾರ ಇವರಿಗೆ ಸುರಕ್ಷಿತ ಸ್ಥಳದಲ್ಲಿ ಮನೆ ನಿರ್ಮಿಸಲು ಮುಂದಾಗಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಸದ್ಯ ನಾವು ಪರಿಸ್ಥಿತಿಯನ್ನು ಅವಲೋಕನ ನಡೆಸಿದ್ದು, ಮೊದಲ ಹಂತದಲ್ಲಿ ಸರ್ವೆ ಕಾರ್ಯ ನೆರವೇರಿಸಿದ್ದೇವೆ. ಸದ್ಯ ಅರ್ಹರಿಗೆ ರೈನ್ ಕೋಟ್, ಸ್ಟೌವ್, ರೇಷನ್ ಕಿಟ್, ಪಾತ್ರೆ ಸೇರಿದಂತೆ ಮುಂತಾದ ಅಗತ್ಯ ಮೂಲಭೂತ ವಸ್ತುಗಳನ್ನು ವಿತರಿಸಿದ್ದೇವೆ. ಮುಂದಿನ ದಿನಗಳಲ್ಲಿ ಸಂತ್ರಸ್ಥರ ಪುನರ್ವಸತಿ ಕಾರ್ಯದಲ್ಲೂ ಕೈಜೋಡಿಸಲು ಶ್ರಮಿಸುತ್ತೇವೆ” ಎಂದು ಈ ದಿನ.ಕಾಮ್ಗೆ ತಿಳಿಸಿದ್ದಾರೆ.

HRS 3

ಪರಿಹಾರ ಕಾರ್ಯದ ವೇಳೆ ಹೆಚ್‌ಆರ್‌ಎಸ್‌ನ ಭಟ್ಕಳದ ನಾಯಕ ಅನಮ್ ಆಲಾ, ಬಿಲಾಲ್ ಉಡುಪಿ, ಝುಬೈರ್ ಮಲ್ಪೆ, ಸಲೀಂ ಮಲ್ಪೆ,ಕಮರುದ್ದೀನ್ ಭಟ್ಕಳ, ಹಾಗೂ ಜಮಾಅತೆ ಇಸ್ಲಾಮೀ ಹಿಂದ್ ಭಟ್ಕಳ ಘಟಕದ ಅಧ್ಯಕ್ಷ ಮೌಲಾನ ಝುಬೇರ್ ಮೌಲವಿ ಸೇರಿದಂತೆ ಮತ್ತಿತರಲ್ಲಿದ್ದರು.

ಗುಡ್ಡ ಕುಸಿತ ದುರಂತದಲ್ಲಿ ಈವರೆಗಿನ ಮಾಹಿತಿಯಂತೆ 12 ಮಂದಿ ಮೃತಪಟ್ಟಿದ್ದು ಎಂಟು ಮಂದಿಯ ಮೃತದೇಹ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ಚಹಾ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದರು ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಅವರಿದ್ದ ಟ್ರಕ್ ಕೂಡ ಮಣ್ಣಲ್ಲಿ ಹೂತು ಹೋಗಿದ್ದು ರಕ್ಷಣಾ ಕಾರ್ಯ ಸತತವಾಗಿ ನಡೆಯುತ್ತಿದೆ. 10 ನೇ ದಿನಕ್ಕೆ ಕಾಲಿಟ್ಟಿದೆ.

HRS 4 HRS 3 SHIROOR 3 shiroor 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...