ಉಡುಪಿ | ಕಟ್ಟಿಂಗೇರಿ ಶಿಲುಬೆಗೆ ಹಾನಿ, ಕಥೊಲಿಕ್ ಸಭಾ ಉಡುಪಿ, ಮಂಗಳೂರು ಪ್ರದೇಶ ಖಂಡನೆ

Date:

ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿರುವುದನ್ನು ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶ ಕೇಂದ್ರ ಸಮಿತಿಗಳು ಖಂಡಿಸಿವೆ.

ಖಾಸಗಿ ಸ್ಥಳದಲ್ಲಿ ನಿರ್ಮಿಸಲಾಗಿದ್ದ ಕ್ರಿಸ್ತರ ಶಿಲುಬೆಯನ್ನು ಯಾವುದೋ ದುರುದ್ದೇಶವಿಟ್ಟುಕೊಂಡು ವಿರೂಪಗೊಳಿಸಿರುವುದು ಜಿಲ್ಲೆಯ ಶಾಂತಿ ಸೌಹಾರ್ಧತೆಯನ್ನು ಕೆಡಿಸುವ ಹುನ್ನಾರವಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಧರ್ಮಿಯರು ಸಾಮರಸ್ಯದಿಂದ ಬದುಕುತ್ತಿದ್ದು ಅದನ್ನು ಕೆಡಿಸುವ ನಿಟ್ಟಿನಲ್ಲಿ ಇಂತಹ ವರ್ತನೆಯನ್ನು ತೋರಿದ್ದಾರೆ.

ಶಿಲುಬೆ ಕ್ರೈಸ್ತ ಸಮುದಾಯದಕ್ಕೆ ಗೌರವ ಹಾಗೂ ಪಾವಿತ್ರ್ಯತೆಯ ಸಂಕೇತವಾಗಿದ್ದು ಘಟನೆಯಿಂದ ಜಿಲ್ಲೆಯ ಕ್ರಿಶ್ಚಿಯನ್ ಭಾಂಧವರ ಭಾವನೆಗಳಿಗೆ ನೋವಾಗಿದೆ. ಪೊಲೀಸ್ ಇಲಾಖೆಗೆ ಈಗಾಗಲೇ ಘಟನೆ ಕುರಿತು ದೂರು ದಾಖಲಿಸಿದ್ದು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದವರನ್ನು ಪೊಲೀಸರು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ಹಾಗೂ ಮಂಗಳೂರು ಪ್ರದೇಶ ಅಧ್ಯಕ್ಷರಾದ ಆಲ್ವಿನ್ ಡಿಸೋಜಾ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...