ಉಡುಪಿ | ಕಟ್ಟಿಂಗೇರಿಯಲ್ಲಿ ಕ್ರೈಸ್ತರ ಶಿಲುಬೆ ಧ್ವಂಸ, ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆಯ ಕಾಪು ತಾಲೂಕು ಶಿರ್ವ ಗ್ರಾಮದ ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು ಈ ಬಗ್ಗೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬೆಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ಧ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. 15 ದಿನಗಳ ಹಿಂದೆ ಇಲ್ಲಿ ಪೂಜೆ ಸಲ್ಲಿಸಲಾಗಿತ್ತು. ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ. ಈ ಕೃತ್ಯದಿಂದ ತಮಗೆ ಅಘಾತವಾಗಿದ್ದು ಕ್ರೈಸ್ತ ಧರ್ಮಕ್ಕೆ ಅಪಮಾನವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಟ್ಟಿಂಗೇರಿ ನಿವಾಸಿ ಪ್ಲಾಲೀವನ್ ಎಂಬವರು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...