ಉಡುಪಿ | ಮನೆ ಬಾಡಿಗೆ ವಿಚಾರ ಕೇಳಿ ಬಂದವರಿಂದ ಚಿನ್ನದ ಸರ ಕಳವು, ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ

Date:

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕುರ್ಕಾಲು ಗ್ರಾಮದ ಶಂಕರಪುರದಲ್ಲಿ ಇಂದು ಬೆಳಿಗ್ಗೆ ನಡೆದ ಸರ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಚುರುಕಿನ ಕಾರ್ಯಾಚರಣೆಯಲ್ಲಿ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.

ಘಟನೆಯ ಹಿ‌ನ್ನಲೆ : ಇಂದು ಫೆ.21 ರಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಹೆಲೆನ್ ಡಿಸೋಜರವರು ತಮ್ಮ ಮನೆಯ ಹಿಂಭಾಗದಲ್ಲಿ ಗೀತಾರವರೊಂದಿಗೆ ಮಲ್ಲಿಗೆ ಕಟ್ಟುತ್ತಿದ್ದ ವೇಳೆ ಈ ಹಿಂದೆ ಬಾಡಿಗೆಗೆ ವಾಸವಾಗಿದ್ದ ಆನಂದ ಹಾಗೂ ಇನ್ನಿಬ್ಬರು ಮನೆ ಬಾಡಿಗೆ ವಿಚಾರಿಸಲು ಬಂದಿದ್ದಾರೆ. ಅವರು ಮಾತನಾಡುತ್ತಾ ಚಹ ಕುಡಿದು, ರೂಮ್ ಇಲ್ಲವೆಂದು ತಿಳಿಸಿದ ಬಳಿಕ ಪಿರ್ಯಾದಿದಾರರ ಪಕ್ಕದ ಮನೆಯ ಅಕ್ಕ ತೆರಜಾರವರ ಮನೆ ಕಡೆಗೆ ತೆರಳಿದ್ದಾರೆ.

ಸುಮಾರು 9:45ರ ವೇಳೆಗೆ ಅವರ ಪೈಕಿ ಒಬ್ಬ ವ್ಯಕ್ತಿ ಪುನಃ ಬಂದು “ಬಾಡಿಗೆ ರೂಮ್ ಬೇಕಾದರೆ ಕರೆ ಮಾಡುತ್ತೇನೆ” ಎಂದು ಹೇಳಿ ಮೊಬೈಲ್ ನಂಬರ್ ಕೇಳಿದ್ದಾನೆ. ನಂಬರ್ ಹೇಳುವ ವೇಳೆ ಆರೋಪಿಯು ಏಕಾಏಕಿ ಕುತ್ತಿಗೆಗೆ ಕೈ ಹಾಕಿ, ಕುತ್ತಿಗೆಯಲ್ಲಿದ್ದ ಸುಮಾರು 28 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕಸಿದುಕೊಂಡಿದ್ದಾನೆ. ತಡೆಯಲು ಬಂದ ಹೆಲೆನ್ ಡಿಸೋಜರವರು ಅಕ್ಕ ತೆರಜಾರವರನ್ನು ದೂಡಿ ಹಾಕಿ ಮೂವರು ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಕಳುವಾದ ಚಿನ್ನದ ಸರದ ಅಂದಾಜು ಮೌಲ್ಯ ₹3.50 ಲಕ್ಷ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ನೀಡಿದ ದೂರಿನ ಮೇರೆಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪತ್ತೆಗಾಗಿ ತಕ್ಷಣ ಕಾರ್ಯಪ್ರವೃತ್ತರಾದ ಶಿರ್ವ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಅದರಲ್ಲಿ ಪಲ್ಸರ್ ಬೈಕ್‌ನಲ್ಲಿ ಮೂವರು ಆರೋಪಿಗಳು ಬಂದು ಕೃತ್ಯ ಎಸಗಿರುವುದು ಪತ್ತೆಯಾಯಿತು. ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿ ಮೂಲಕ ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್‌ಗಳಿಗೆ ಮಾಹಿತಿ ನೀಡಲಾಗಿದ್ದು, ನಾಕಾಬಂದಿ ನಡೆಸಲಾಯಿತು.

ಕೃತ್ಯ ನಡೆದ ಮೂರರಿಂದ ನಾಲ್ಕು ಗಂಟೆಯೊಳಗಾಗಿ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಬೈಂದೂರು ಪೊಲೀಸರು ಅನುಮಾನಾಸ್ಪದ ಬೈಕ್ ತಡೆದು ಪರಿಶೀಲಿಸಿ, ಆರೋಪಿಗಳನ್ನು ವಶಕ್ಕೆ ಪಡೆದು ಶಿರ್ವ ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿರ್ವ ಪೊಲೀಸರು ಆರೋಪಿಗಳಿಂದ ಒಂದು ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಸಿಪಿಐ ಕಾಪು ಅಜ್ಮತ್ ಅಲಿ ನೇತೃತ್ವದ ತಂಡದೊಂದಿಗೆ ಶಿರ್ವ ಠಾಣಾಧಿಕಾರಿ ಮಂಜುನಾಥ ಮರಬದ, ಬೈಂದೂರು ಪಿಎಸ್ಐ ಸುನಿಲ್ ಕುಮಾರ್, ದಯಾನಂದ ಪ್ರಭು, ಅನ್ವರ್ ಅಲಿ, ಹರೀಶ, ಯಲಾಲ್ಲಿಂಗ ಸುರೇಶ್ ಹಾಗೂ ಬೈಂದೂರು ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...