ಶಿವಮೊಗ್ಗ | 112 ಇ ಆರ್ ಎಸ್ ಎಸ್ ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಬಡಜೀವ

Date:

ಶಿವಮೊಗ್ಗ ಪೊಲೀಸರು ಮತ್ತೊಮ್ಮೆ ಜೀವವೊಂದನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭದ್ರಾವತಿಯಲ್ಲಿ ನೇಣು ಬಿಗಿದುಕೊಳ್ಳುತ್ತಿದ್ದ ಯುವಕನನ್ನು 112 ಪೊಲೀಸರು ಕಾಪಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದ ಹೃದಯಸ್ಪರ್ಶಿ ಘಟನೆಯಲ್ಲಿ, ಇ.ಆರ್.ಎಸ್.ಎಸ್-112 ತುರ್ತು ಸೇವೆ ಮತ್ತು ಪೊಲೀಸ್ ತಂಡ ಸಿಬ್ಬಂದಿ ಒಬ್ಬ ಯುವಕನ ಪ್ರಾಣ ಉಳಿಸಿದ್ದಾರೆ.

1001596189

ಇಲ್ಲಿನ ನಿವಾಸಿ ಮಹಿಳೆಯೊಬ್ಬರು 112 ಪೊಲೀಸರಿಗೆ ಕರೆ ಮಾಡಿ, ತನ್ನ ಮಗ ಮನೆಯೊಳಗೆ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ವಿಷಯ ತಿಳಿಯುತ್ತಲೇ ವಿನಯ್ ಕುಮಾರ್ (ಸಿಪಿಸಿ-1618), ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಂತೋಷ್ ಕುಮಾರ್ (ಎಪಿಸಿ-50) ತುರ್ತಾಗಿ ಸ್ಥಳಕ್ಕೆ ಬಂದಿದ್ದಾರೆ. ಅಲ್ಲದೆ ಮನೆಯ ಬಾಗಿಲನ್ನು ಓಪನ್​ ಮಾಡಿ, ಯುವಕನನ್ನು ರಕ್ಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001596183

ಯುವಕನ ಹಿಂದೆ ಚಾಲಕ ವೃತ್ತಿ ಮಾಡುತ್ತಿದ್ದನಂತೆ, ಇದೀಗ ಕೆಲಸ ಇಲ್ಲದೇ ಇರುವುದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕುಡಿಯುವ ಚಟಕ್ಕೆ ಅಡಿಕ್ಟ್​​ ಆಗಿದ್ದ. ಈ ನಡುವೆ ಹಣಕ್ಕಾಗಿ ತಾಯಿಯ ಜೊತೆಗೆ ಜಗಳವಾಡಿ, ನೇಣು ಹಾಕಿಕೊಳ್ಳುವುದಕ್ಕೆ ಮುಂದಾಗಿದ್ದ. ತಾಯಿ ನೀಡಿದ ದೂರಿನಂತೆ ಸ್ಥಳಕ್ಕೆ ಬಂದ ಪೊಲೀಸರು ಯುವಕನಿಗೆ ಮಾನಸಿಕ ಸ್ಟೈರ್ಯ ತುಂಬಿ, ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

112 ಪೊಲೀಸರ ಈ ಕೆಲಸಕ್ಕೆ ಮಿಥುನ್ ಕುಮಾರ್ ಜಿ.ಕೆ. (ಐಪಿಎಸ್), ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು, ಪ್ರಶಂಸೆ ವ್ಯಕ್ತಪಡಿಸಿದ್ದಾರಷ್ಟೆ ಅಲ್ಲದೆ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...