ಶಿವಮೊಗ್ಗ | ವಿಡಿಯೋ ಕಾಲ್‌ನಲ್ಲೇ ವ್ಯಕ್ತಿಗೆ 19 ಲಕ್ಷ ರೂಪಾಯಿ. ವಂಚನೆ

Date:

ಶಿವಮೊಗ್ಗ, ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ.

ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಬೆದರಿಸಿದ್ದಾನೆ.

ಮರುದಿನ ಪುನಃ ವಿಡಿಯೋ ಕಾಲ್ ಮಾಡಿ ನ್ಯಾಯಾಲಯದಲ್ಲಿ ನಿಮಗೆ ಜಾಮೀನು ಕೊಡಿಸುತ್ತೇವೆ ಎಂದು ನಂಬಿಸಿದ್ದ. ಮತ್ತೊಂದು ವಿಡಿಯೋ ಕರೆಯಲ್ಲಿ ಕೋರ್ಟ್ ಮಾದರಿ ಹಿನ್ನಲೆ, ನ್ಯಾಯಾಧೀಶರೊಬ್ಬರು ಕುಳಿತಿರುವಂತಿತ್ತು. ನ್ಯಾಯಾಧೀಶನಂತಿದ್ದ ವ್ಯಕ್ತಿ ಶಿವಮೊಗ್ಗದ ನಿವೃತ್ತ ಉದ್ಯೋಗಿಯ ಮಾಹಿತಿ ಕೇಳಿದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತದನಂತರ ೧೯ ಲಕ್ಷ ಕೊಡಬೇಕು ಎಂದು ಬೆದರಿಸಿದ್ದಾರೆ. ಆತಂಕದಲ್ಲಿ ನಿವೃತ್ತ ಉದ್ಯೋಗಿಯು ಬ್ಯಾಂಕ್‌ನಲ್ಲಿ ಚಿನ್ನದ ಮೇಲೆ ಸಾಲ ಪಡೆದು ವಂಚಕರು ಹೇಳಿದ ಖಾತೆಗೆ ಹಣ ವರ್ಗಾಯಿಸಿದ್ದಾರೆ.

ಕೊನೆಗೆ ತಾವು ಮೋಸ ಹೋಗಿರುವ ಅರಿವಾಗಿದ್ದು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...