ಶಿವಮೊಗ್ಗ | ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು : ವಿಡಿಯೋ ವೈರಲ್‌

Date:

ಶಿವಮೊಗ್ಗದ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ನೀರುಪಾಲಾಗಿದ್ದಾನೆ.

ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು.

ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.20 ಸೆಕೆಂಡ್‌ನ ವಿಡಿಯೋ ವೈರಲ್‌ಇನ್ನು, ಫಾಲ್ಸ್‌ನಲ್ಲಿ ರಮೇಶ್‌ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಾಲ್ಸ್‌ನ ತುದಿಯಲ್ಲಿ ಬಂಡೆಯೊಂದರ ಮೇಲೆ ರಮೇಶ್‌ ಕುಳಿತಿರುತ್ತಾರೆ. ವಿಡಿಯೋದ ಆರಂಭದಲ್ಲಿ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಸಂಭ್ರಮಿಸುತ್ತಾರೆ. ನಂತರ ತಾನು ಕುಳಿತಿದ್ದ ಬಂಡೆಯಿಂದ ಕೆಳಗಿಳಿಯುತ್ತಾರೆ. ನೀರಿನ ರಭಸಕ್ಕೆ ರಮೇಶ್‌ ತೇಲಿ ಹೋಗಿದ್ದಾರೆ.

ಈ ವೇಳೆ ಸ್ನೇಹಿತರು ಕೂಗಿಕೊಳ್ಳುವುದು ವಿಡಿಯೋ ರೆಕಾರ್ಡ್‌ ಆಗಿದೆ.ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದೆ.

ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...