ಶಿವಮೊಗ್ಗ | ಭದ್ರಾವತಿಯಲ್ಲಿ ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪಿ ಬಂಧನ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಭದ್ರಾವತಿಯ ಭಂಡಾರಹಳ್ಳಿ ಎದುರಿನ ನಾಗಮ್ಮ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ಕೆಲಸ ಮಾಡುವ ರಂಗೇಗೌಡ (57) ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಯಿಂದ 500 ರೂಪಾಯಿ. ಮುಖಬೆಲೆಯ 13 ನೋಟುಗಳು ಹಾಗೂ 200 ರೂಪಾಯಿ., 100 ರೂಪಾಯಿ., 50 ರೂಪಾಯಿ. ಮುಖಬೆಲೆಯ ತಲಾ 1 ನಕಲಿ ನೋಟು ಹಾಗೂ ಕೃತ್ಯಕ್ಕೆ ಬಳಸಿದ್ದ ಡಿಸ್ಕವರ್ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆರೋಪಿಯು ಬೇರೆಡೆಯೂ ನಕಲಿ ನೋಟುಗಳ ಚಲಾವಣೆ ಮಾಡಿರುವ ಕುರಿತಾಗಿ ಪೊಲೀಸರ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ OFP 790829 ಹಾಗೂ 9TV 978202 ಕ್ರಮ ಸಂಖ್ಯೆಯ 500 ಮುಖ ಬೆಲೆಯ ನೋಟುಗಳು ಕಂಡುಬಂದಲ್ಲಿ, ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

1001755519

ಭದ್ರಾವತಿ ನಗರದ ಕೂಲಿ ಬ್ಲಾಕ್ ಶೆಡ್ ನಿವಾಸಿ ಅಜಯ್ ಎಂಬುವರಿಗೆ 12-6-2025 ರ ಸಂಜೆ ಡಿಸ್ಕವರ್ ಬೈಕ್ ನಲ್ಲಿ ಆಗಮಿಸಿದ ಆರೋಪಿಯು, 500 ರೂ. ನಕಲಿ ನೋಟು ನೀಡಿ ವ್ಯಾಪಾರ ಮಾಡಿ ತೆರಳಿದ್ದ. ಈ ಕುರಿತಂತೆ ಅಜಯ್ ಅವರು ಪೊಲೀಸರಿಗೆ ದೂರು ನೀಡಿದ್ದರು.ಭದ್ರಾವತಿ ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಮಂಜುನಾಥ್, ಪಿಎಸ್ಐ ರಮೇಶ್, ಎಎಸ್ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ವಿಜಯ್, ಶ್ರೀಧರ್, ಮಾರುತಿ ಪಾಟೀಲ್, ಪ್ರಸನ್ನ, ರಘು, ನಾಗರಾಜಪ್ಪರವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡದ ಉತ್ತಮ ಕಾರ್ಯವನ್ನು ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...