ಶಿವಮೊಗ್ಗ, ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ದಿನಾಂಕ: 11-10-2025 ರಂದು ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ THE BHARATIYA NYAYA SANHITA (BNS), 2023 (U/s-309(5),332(c)) ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ ಪ್ರಕಾರ, ಇಲ್ಲಿನ ಹುಲಿದೇವರ ಬನದ ಬಳಿಯ ಹೊಸಕೊಪ್ಪದಲ್ಲಿ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಮಹಿಳೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಅಪರಿಚಿತನೊಬ್ಬ ಮನೆಯೊಳಗೆ ಬಂದಿದ್ದಾನೆ. ಬಳಿಕ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಆಕೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕೀಳಲು ಮುಂದಾಗಿದ್ದ. ಅಷ್ಟರಲ್ಲಿ ಮಹಿಳೆಯು ಸರವನ್ನು ಗಟ್ಟಿಯಾಗಿ ಹಿಡಿದು, ಕೂಗಲು ಆರಂಭಿಸಿದ್ದರು. ಹೀಗಾಗಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಕುಟುಂಬದವರ ಬಳಿ ವಿಚಾರಿಸಿ ಪೊಲೀಸರಿಗೆ ದೂರು ನೀಡಲಾಗಿದೆ.





