ಶಿವಮೊಗ್ಗ | ಆಟೋ ಚಾಲಕನ ಅಡ್ಡಗಟ್ಟಿ ದರೋಡೆ

Date:

ಶಿವಮೊಗ್ಗ ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು.

ಅದರಂತೆ, ಜುಲೈ 5ರಂದು ಅಲ್ಲಾಬಕ್ಷ್ ಎಂಬುವರು ಮೂರು ಫಂಡ್‌ಗಳ ಚೀಟಿಗಳನ್ನು ಮುಗಿಸಿಕೊಂಡು, ಫಂಡ್‌ನಲ್ಲಿ ಉಳಿದ 2 ಲಕ್ಷ ರೂಪಾಯಿ ಹಣ ಮತ್ತು ಫಂಡ್‌ಗೆ ಸಂಬಂಧಿಸಿದ ಪುಸ್ತಕಗಳನ್ನು ಬ್ಯಾಗ್‌ನಲ್ಲಿಟ್ಟುಕೊಂಡು ತಮ್ಮ ಸಹೋದರನೊಂದಿಗೆ ಆಟೋದಲ್ಲಿ ಹೊರಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಕೆ.ಆರ್. ಪುರಂ ಬಡಾವಣೆ ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಏಕಾಏಕಿ ಎರಡು ಬೈಕ್‌ಗಳಲ್ಲಿ ಬಂದ ಐವರು ಕಳ್ಳರು ಆಟೋವನ್ನು ಅಡ್ಡಗಟ್ಟಿದ್ದಾರೆ. ನಂತರ, ಅಲ್ಲಾಬಕ್ಷ್ ಬ್ಯಾಗ್‌ನಲ್ಲಿದ್ದ ಹಣವನ್ನು ಕಸಿದುಕೊಂಡು, ಅವರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...