ಶಿವಮೊಗ್ಗ | ವಿಮಾನ ನಿಲ್ದಾಣದಲ್ಲಿ ಆಟೋ ಬಾಡಿಗೆ ; ಮನವಿಗೂ ಸ್ಪಂದಿಸದೆ, ಆರ್ ಟಿ ಒ ಅಧಿಕಾರಿಗಳ ಬೇಜವಾಬ್ದಾರಿ

Date:

ಶಿವಮೊಗ್ಗದ ವಿಮಾನ ನಿಲ್ದಾಣ, ವಿಮಾನ ನಿಲ್ದಾಣವೋ ಅಥವಾ ರೈಲ್ವೆ ನಿಲ್ದಾಣವೋ ಗೊತ್ತಿಲ್ಲ. ಪತ್ರಕರ್ತರು ಮತ್ತು ಸಾಮಾನ್ಯ ಜನರಿಗೆ ವಿಮಾನ ನಿಲ್ದಾಣದ ಗೇಟ್ ನಲ್ಲೇ ತಡೆಯುವ ಸೆಕ್ಯೂರಿಟಿಗಳು ಈ ಆಟೋಗಳನ್ನ ಒಳಗೆ ಬಿಟ್ಟುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ ಎಂಬುದು ಆಕ್ರೋಶಕ್ಕೆ ಕಾರಣವಾಗಿದೆ. ಈ ವ್ಯವಸ್ಥೆಗೆ ಬ್ರೇಕ್ ಹಾಕದಿದ್ದರೆ ಮತ್ತೊಂದು ರೈಲ್ವೆ ನಿಲ್ದಾಣವಾಗುವ ಸಾಧ್ಯತೆಯಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶಿವಮೊಗ್ಗ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದಲ್ಲಿ ಆಟೋ ಚಾಲಕರಿಂದ ಬಾಡಿಗೆ ಮಾಡಿ ಕಾನೂನು ಉಲ್ಲಂಘನೆ ಆಗುತ್ತಿದೆ ಎಂದು ಸೋಗಾನೆ ವಿಮಾನ ನಿಲ್ದಾಣ ಚಾಲಕರು ಆರ್ ಟಿಒಗೆ ಮನವಿ ಮಾಡಿ 15 ದಿನಗಳು ಕಳೆದರೂ ಅಧಿಕಾರಿಗಳು ನಿದ್ರೆಗೆ ಜಾರಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

1002382689

ಈಗಾಗಲೇ ಟ್ಯಾಕ್ಸಿ ಮತ್ತು ಆಟೋ ರಿಕ್ಷಗಳ ನಡುನೆ ಪ್ಯಾಸೆಂಜರ್ ಗಳನ್ನ ಹತ್ತಿಸಿಕೊಳ್ಳುವ ಬಗ್ಗೆ ಪೈಪೋಟಿ ನಡೆಯುತ್ತಿದೆ. ಇಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಕ್ರಮ ಜರುಗದಿದ್ದರೆ ಅಧಿಕಾರಿಗಳೆ ನೇರ ಹೊಣೆ ಆಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಗಾನೆ ವಿಮಾನ ನಿಲ್ದಾಣ ಚಾಲಕರು ಮತ್ತು ಮಾಲೀಕರ ಸಂಘದಲ್ಲಿ 60 ಜನ ಸದಸ್ಯರಿದ್ದು, ಎರಡು ವರ್ಷಗಳಿಂದ ಯಾವುದೇ ಕಾನೂನು ಉಲ್ಲಂಘನೆ ಆಗದೇ ಬಾಡಿಗೆ ಮಾಡಿಕೊಂದು ಬಂದಿದ್ದು,

ಇತ್ತೀಚಿನ ದಿನಗಳಲ್ಲಿ ಆಟೋ ಚಾಲಕರು ವಿಮಾನ ನಿಲ್ದಾಣದ ಒಳಗಡೆ ಬಂದು ಯಾವುದೇ ಕಾನೂನು ಪಾಲಿಸದೆ ಅನುಮತಿ ಇಲ್ಲದಿದ್ದರೂ ಕಾನೂನು ಬಾಹಿರವಾಗಿ ಬಾಡಿಗೆ ಮಾಡುತ್ತಿರುತ್ತಾರೆ ಎಂಬುದು ಆರೋಪವಾಗಿದೆ.

ಇದರಿಂದ ಕಾರು ಚಾಲಕರಿಗು ಮತ್ತು ಆಟೋ ಚಾಲಕರಿಗು ಪ್ರತಿ ದಿನ ವಿಮಾನ ಪ್ರಯಾಣಿಕರ ಎದುರು ಮಾತಿನ ಚಕಮಕಿ ನಡೆಯುತ್ತಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ವಾತಾವರಣ ಹದಗೆಡುತ್ತಿದೆ.

ಆಟೋ ಚಾಲಕರಿಗೆ ಬಸ್ ಸ್ಟ್ಯಾಂಡ್‌ನಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಬಾಡಿಗೆ ಮಾಡಲು ಅನುಮತಿ ಇದ್ದು, ವಿಮಾನ ನಿಲ್ದಾಣ ಬಸ್ ಸ್ಟ್ಯಾಂಡ್‌ನಿಂದ 14.50 ಕಿ.ಮೀ ಇದ್ದು ಪ್ರತಿ ನಿತ್ಯ ಇದರ ಉಲ್ಲಂಘನೆ ಮಾಡುತ್ತಿದ್ದಾರೆ. ಬಾಡಿಗೆ ಮಾಡುತ್ತಿರುವುದರ ಜೊತೆಗೆ ಕೆಲವು ಆ್ಯಪ್‌ಗಳನ್ನು ಬಳಸಿ ಬಾಡಿಗೆ ಮಾಡುತ್ತಿರುತ್ತಾರೆ.

ಇದರಿಂದ ಕಾನೂನು ರೀತಿಯಲ್ಲಿ ರಿಜಿಸ್ಟರ್ ಆಗಿರುವ ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರಿಗೆ ತೊಂದರೆಯಾಗುತ್ತಿದೆ ಎಂದು ಸಂಘ ಆರ್ ಟಿಒಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದೆ.

ಹಾಗಾಗಿ ಆಟೋ ಚಾಲಕರು ಏರ್‌ಪೋರ್ಟ್‌ಗೆ ಬಾರದಂತೆ ತಡೆದು ಕಾರು ಚಾಲಕರಿಗೆ ಬಾಡಿಗೆ ಮಾಡಲು ಯಾವುದೇ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳಲಾಗಿದೆ.

ಇದೇ ರೀತಿಯಾಗಿ ಹಲವು ಬಾರಿ ಆರ್ ಟಿಒಗೆ ಸಂಘದ ವತಿಯಿಂದ ಮನವಿಯನ್ನು ಸಲ್ಲಿಸಿದ್ದರು ಕೂಡ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ತಾವುಗಳು ಈ ಮನವಿಯನ್ನು ಪುರಸ್ಕರಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇವೆ. ಈ ಮನವಿಯನ್ನು ಪರಿಗಣನೆಗೆ ತೆಗೆದುಕೊಳ್ಳದೇ ಇದ್ದಲ್ಲಿ ಸೋಗಾನೆ ವಿಮಾನ ನಿಲ್ದಾಣ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಘ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...