ಶಿವಮೊಗ್ಗ | ಒಳ “ಮೀಸಲಾತಿ ವರ್ಗಿಕರಣ ವಿರೋಧಿಸಿ” ಸೆಪ್ಟೆಂಬರ್ 12 ರಿಂದ ಬಂಜಾರರ ಅನಿರ್ದಿಷ್ಟ ಧರಣಿ

Date:

“ಶಿವಮೊಗ್ಗ:ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ” ಸೆಪ್ಟೆಂಬರ್ 12 ರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ (ಲಂಬಾಣಿ) ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಅನಿರ್ದಿಷ್ಟ ಧರಣಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಅಶೋಕ್ ನಾಯ್ಕ್, ಅಂದು ಬೆಳಿಗ್ಗೆ 10.00 ಗಂಟೆಗೆ ಅನಿರ್ದಿಷ್ಟ ಧರಣಿ ಆರಂಭವಾಗಲಿದೆ ಎಂದರು.

ಇದರಲ್ಲಿ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬದ ವಿವಿಧ ಗ್ರಾಮಗಳ ಬಂಜಾರರು ಪಾಳಿ ಪ್ರಕಾರ ಭಾಗವಹಿಸುವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ರಚನೆಯಾಗಿದ್ದ ನಿವೃತ್ತ ನ್ಯಾ. ನಾಗಮೋಹನದಾಸ ಏಕಸದಸ್ಯ ಆಯೋಗವು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನೆ ಕೆಲವು ಬದಲಾವಣೆಯೊಂದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವುದು ಬಂಜಾರ ಸಮುದಾಯ ಸೇರಿದಂತೆ ಇತರೆ ಸಮುದಾಯಗಳಲ್ಲಿ ಆತಂಕವನ್ನುಂಟು ಮಾಡಿದೆ ಎಂದರು.

ಸುಪ್ರೀಂ ಕೋರ್ಟಿನ ಮಾನದಂಡಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಸಿದ್ಧಪಡಿಸಲಾಗಿರುವ ನಾಗಮೋಹನದಾಸ ವರದಿಯು ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ಮುಂದುವರೆದ ಭಾಗದಂತಿದೆ. ಈ ವರದಿಯ ಸಾರಾಂಶಗಳು ವಾಸ್ತವಿಕ ಅಂಕಿ ಸಂಖ್ಯೆಗಳಿಂದ ದೂರವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಶಿಕ್ಷಣ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಅಂಕಿ ಅಂಶಗಳು ದಮನಿತ ಸಮುದಾಯಗಳ ಅನುಮಾನಕ್ಕೆ ಕಾರಣವಾಗಿದೆ ಎಂದರು.

ಈ ಅಂಕಿ ಸಂಖ್ಯೆಗಳು ಯಾವ ಮೂಲದಿಂದ ಪಡೆಯಲಾಗಿದೆ ಎಂಬುದನ್ನು ಆಯೋಗ ಸ್ಪಷ್ಟಪಡಿಸಬೇಕಿದೆ. ನಾಗಮೋಹನದಾಸರವರು ವರದಿಯಲ್ಲಿ ತಿಳಿಸಿರುವಂತೆ ಸರ್ಕಾರದ ಕೆಲವು ಇಲಾಖೆಗಳು ಪರಿಶಿಷ್ಟ ಜಾತಿಯ ಅಂಕಿ ಸಂಖ್ಯೆಗಳು ನೀಡಿರುವುದಿಲ್ಲ, ಕೆಲವು ಕುಟುಂಬಗಳು ನಗರ ಹಾಗೂ ಗ್ರಾಮದಲ್ಲಿ ಅಲಭ್ಯತೆಯ ಕಾರಣಕ್ಕೆ ಸಮೀಕ್ಷೆ ಅಪೂರ್ಣವಾಗಿದೆ ಎಂದು ತಿಳಿಸಿರುವಾಗ, ಸರ್ಕಾರ ಈ ಅಪೂರ್ಣ ವರದಿಯನ್ನೇ ಸಣ್ಣ ಪುಟ್ಟ ಬದಲಾವಣೆಯೊಂದಿಗೆ ಜಾರಿಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.

ನಾಗಮೋಹನದಾಸ ವರದಿಯಲ್ಲಿರುವ 324, 325, 326 ನೇ ಪುಟದಲ್ಲಿ ಇಡೀ ಸಮೀಕ್ಷೆಯ ಫಲಿತಾಂಶವನ್ನು ವಿಶ್ಲೇಷಿಸಿ, ಸಿದ್ಧಪಡಿಸಿರುವ ಕೋಷ್ಟಕದಲ್ಲಿ 26 ವಿವಿಧ ವಿಷಯಗಳ ಮಾನದಂಡಗಳ ಮೇಲೆ ಬೆಳಕು ಚೆಲ್ಲಲಾಗಿದೆ, ಆಯಾ ಜಾತಿಗಳ ಪ್ರಗತಿಯ ಮೇಲೆ ಸಿದ್ಧಪಡಿಸಿರುವ 23 ವಿಷಯವಾರು ಮಾನದಂಡಗಳಲ್ಲಿ ‘ಡಿ’ ಗುಂಪಿನಲ್ಲಿ ಬರುವ ಲಂಬಾಣಿ ಮತ್ತು ಇತರೆ ಸಮುದಾಯ ಕೇವಲ 6 ವಿಷಯಗಳಲ್ಲಿ ಮಾತ್ರ ತುಸು ಮುಂದಿವೆ ಎಂದು ಕಾಣಿಸಲಾಗಿದೆ. ಉಳಿದ 17 ವಿಷಯಗಳಲ್ಲಿ ‘ಸಿ’ ಗುಂಪಿಗಿಂತ ತುಂಬಾ ಹಿಂದುಳಿದಿದೆ ಎಂದು ಅಂಕಿ ಸಂಖ್ಯೆಗಳ ಮೂಲಕ ತೋರಿಸಲಾಗಿದೆ. ವಿಷಯ ಹೀಗಿರುವಾಗ ‘ಡಿ’ ಗುಂಪಿಗಿಂತ ‘ಸಿ’ ಗುಂಪಿನ ಸಮುದಾಯಕ್ಕೆ ಶೇಕಡವಾರು ಹೆಚ್ಚಿನ ಮೀಸಲಾತಿ ನೀಡಿರುವುದು ಯಾವ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹುನ್ನಾರವಿದೆ ಎಂಬುದನ್ನು ನಾಗಮೋಹನ್‌ದಾಸರವರೇ ಹೇಳಬೇಕಿದೆ ಎಂದರು.

ಯಾವುದೇ ದೃಷ್ಟಿಕೋನದಿಂದಲೂ ಹೊಂದಾಣಿಕೆ ಆಗದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದ ‘ಸಿ’ ವರ್ಗದವರೊಂದಿಗೆ ಸೇರಿಸಿ ಅಲೆಮಾರಿಗಳಿಗೆ ಮೀಸಲಾತಿಯಿಂದ ವಂಚನೆ ಮಾಡಲು ಮುಂದಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಹಲವು ಆಯೋಗಗಳ ವರದಿಯಲ್ಲಿ ತಿಳಿಸಿರುವಂತೆ ಅಲೆಮಾರಿಗಳಿಗೂ ಶೇ.1 ರಷ್ಟು ಮೀಸಲಾತಿ ನೀಡಬೇಕು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ಸಿ ವರ್ಗದಲ್ಲಿ ಬರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದವರಿಗೂ ಶೇ. 6 ರಷ್ಟು ಮೀಸಲಾತಿ ನಿಗದಿಗೊಳಿಸಲು ಸರ್ಕಾರ ಮುಂದಾಗಬೇಕಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...