ಶಿವಮೊಗ್ಗ | ಬಿಜೆಪಿಯ ಮುಂದಿನ ಟಾರ್ಗೆಟ್‌ ಸಿಟಿ ರವಿ: ಶಾಸಕ ಬೇಳೂರು ಗೋಪಾಲ್ ಕೃಷ್ಣ

Date:

ಯತ್ನಾಳ್ ಎಂಬ ಹಿಂದೂ ಹುಲಿಯನ್ನು ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು ಬೋನಿನಲ್ಲಿ ಹಾಕಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡುವ ಎಲ್ಲರನ್ನೂ ರಾಜಕೀಯವಾಗಿ ಬಿಜೆಪಿ ಮುಗಿಸುತ್ತದೆ. ಮುಂದಿನ ಟಾರ್ಗೆಟ್‌ ಸಿ ಟಿ ರವಿ ಆಗಿರಲಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲ್‌ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, “ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದ ಅನಂತ್ ಕುಮಾರ್ ಹೆಗ್ಡೆ, ಈಶ್ವರಪ್ಪ ಹಾಗೂ ಪ್ರತಾಪ್ ಸಿಂಹ ಅವರನ್ನ ಮುಗ್ಸಿದ್ದಾರೆ. ಈಗ ಯತ್ನಾಳ್‌ರನ್ನು ಮುಗ್ಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಬೈದಿರುವವರಲ್ಲಿ ಯತ್ನಾಳ್ ಒಬ್ಬರು. ಹಾಗೆ ಯಡಿಯೂರಪ್ಪ ಮತ್ತು ಅವರ ಮಕ್ಕಳನ್ನೂ ಬೈದಿದ್ದಾರೆ. ಹಿಂದುತ್ವದ ಬಗ್ಗೆ ಹೆಚ್ಚು ಮಾತನಾಡುವ ಬಿಜೆಪಿಯ ಬಹತೇಕರನ್ನ ಬಿಜೆಪಿ ರಾಜಕೀಯವಾಗಿ ಮುಗಿಸಿದೆ. ಮುಂದಿನ ಸರದಿ ಸಿಟಿ ರವಿಯವರದ್ದು” ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪನವರು ಟಿಕೆಟ್ ಕೇಳಿದ್ದೇ ತಪ್ಪಾ? ಇಡೀ ಜಿಲ್ಲೆಯಲ್ಲಿ ಹಿಂದುತ್ವ ಪ್ರತಿಪಾದನೆ ಮಾಡುತ್ತಿದ್ದ ಈಶ್ವರಪ್ಪನವರನ್ನೇ ಹೊರಹಾಕಿದ ಮೇಲೆ ಯತ್ನಾಳರನ್ನ ಬಿಡುತ್ತಾರಾ?. ರೇಣುಕಾಚಾರ್ಯ ನಮ್ಮನ್ನೆಲ್ಲ ಹೈದರಾಬಾದ್‌ಗೆ ಕರೆದುಕೊಂಡು ಹೋದಾಗ ಅಪ್ಪ ಮಕ್ಕಳ ಚಡ್ಡಿ ಬಿಚ್ಚುತ್ತೇನೆ ಎಂದಿದ್ದ. ಅಂದು ಯಡಿಯೂರಪ್ಪ ಮತ್ತು ಅವರ ಮಕ್ಕಳನ್ನು ಬೈದಿದ್ದ ರೇಣುಕಾಚಾರ್ಯ ಇಂದು ಬಿಎಸ್‍ವೈ ಮಾನಸ ಪುತ್ರರಾಗಿದ್ದಾರೆ. ಯತ್ನಾಳ್‌ಗೆ ಪಂಚಮಸಾಲಿ ಸಮಾಜವಿದೆ. ಅವರ ಪರವಾಗಿ ಹೋರಾಟ ಮಾಡುವುದಾಗಿ ಪಂಚಮಸಾಲಿ ಗುರುಗಳು ಹೇಳಿಕೆ ಕೊಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“18 ಶಾಸಕರನ್ನು ಅಮಾನತು ಮಾಡಿದ್ದಕ್ಕೆ ದೊಡ್ಡ ವಿಷಯ ಮಾಡಿದಿರಿ.. ಈಗ ಯತ್ನಾಳ್‌ರನ್ನು ಹೊರ ಹಾಕಿದ್ದಾರಲ್ಲ ಇದಕ್ಕೆ ಏನು ಹೇಳೋದು. ಯೋಗಿ ಆದಿತ್ಯನಾಥ ರಂತಹವರನ್ನು ಕೂಡ ಇವರು ತೆಗೆಯುತ್ತಾರೆ. ರಾಹುಲ್ ಗಾಂಧಿಯನ್ನು ಹೊಗಳಿದ್ದು ನೋಡಿದರೆ ಯೋಗಿ ಆದಿತ್ಯನಾಥ ರವರನ್ನು ಬಿಜೆಪಿ ಹೊರಹಾಕುವ ಸಾಧ್ಯತೆಯಿದೆ. ಬಿವೈ ವಿಜಯೇಂದ್ರ ಗೆದ್ದಂತೆ ಅಲ್ಲ ಅವರಿಗೆ ಪವರ್ ಇದೆ. ಯಡಿಯೂರಪ್ಪ ಮತ್ತು ಅವರ ಮಕ್ಕಳ ಬಳಿ 3.500 ಕೋಟಿ ಹಡಬೆ ದುಡ್ಡು ಇದೆ‌ ಎಂದಿದ್ದಾರೆ. ಯತ್ನಾಳ್ ರವರ ಎಂಎಲ್ಎ ಗಿರಿ ಹಾಗೆ ಇರುತ್ತದೆ. ಯತ್ನಾಳ್ ರವರು ಹಿಂದೂ ಕಟ್ಟಾಳು ಕಾಂಗ್ರೆಸ್ ಪಕ್ಷವನ್ನು ಬೈದಿದ್ದರಿಂದ ಕಾಂಗ್ರೆಸ್‌ಗೆ ಸೇರ್ಪಡೆ ಸಾಧ್ಯವಿಲ್ಲ. ಯಡಿಯೂರಪ್ಪ ಮತ್ತು ಅವರ ಮಕ್ಕಳು ನನ್ನನ್ನು ಮುಗಿಸಲಿಕ್ಕೆ ಹೊರಟಿದ್ರು, ಯಾರನ್ನು ಮುಗಿಸಲು ಸಾಧ್ಯವಿಲ್ಲ ಒಂದಲ್ಲ ಒಂದು ದಿವಸ ಇವರು ಹೊರಗೆ ಹೋಗೆ ಹೋಗುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

ಕಾಂಗ್ರೆಸ್ ಪಕ್ಷದಲ್ಲೂ ಕೂಡ ಗೊಂದಲವಿದೆ. ಕಾಂಗ್ರೆಸ್ ಹೈಕಮಾಂಡ್ ನಮ್ಮಲ್ಲಿರೋ ಗೊಂದಲವನ್ನು ಹೋಗಲಾಡಿಸಬೇಕು. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವುದಾಗಿ ಹೇಳಿದ್ದಾರೆ. ಮುಸ್ಲಿಮರಿಗೆ ಮೀಸಲಾತಿ ವಿಷಯದಲ್ಲಿ ಬಿಜೆಪಿ ಹೋರಾಟ ಸರಿಯಲ್ಲ. 35 ಲಕ್ಷ ಬಡ ಕುಟುಂಬಗಳಿಗೆ ಆಹಾರ ಕಿಟ್ ಕೊಡುವುದಾಗಿ ಮೋದಿಜಿ ಅನೌನ್ಸ್ ಮಾಡಿದ್ದಾರಲ್ಲ. ಇದಕ್ಕೆ ಬಹಿಷ್ಕಾರ ಹಾಕತ್ತೀರಾ? ಸ್ಟ್ರೈಕ್ ಮಾಡುತ್ತೀರಾ? ನಾಚಿಕೆ ಆಗಬೇಕು ಬಿಜೆಪಿಗೆ. ಮುಸ್ಲಿಮರಿಗೆ ನಾವು ಕೊಟ್ಟಿರೋದಕ್ಕೆ ಕೇವಲ ಒಂದು ಪರ್ಸೆಂಟ್ ಮಾತ್ರ ಕೊಟ್ಟಿರೋದು. ಹಿಂದೂ ಮುಸ್ಲಿಂ ಕ್ರೈಸ್ತ ಎಲ್ಲಾ ಧರ್ಮದ ಮಕ್ಕಳು ಶಿಕ್ಷಣ ಪಡೆಯಬೇಕು ಎಂಬುದು ಮೋದಿಜಿ ಹೇಳಿದ್ದಾರಲ್ಲ ಇದು ಅವರಿಗೆ ಮರೆತು ಹೋಗಿದೆ” ಎಂದು ಬಿಜೆಪಿ ನಾಯಕರನ್ನೇ ತರಾಟೆಗೆ ತೆಗೆದುಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...