ಶಿವಮೊಗ್ಗ | ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲದ ವ್ಯವಸ್ಥೆ ಅಗತ್ಯ : ಡಾ | ಯತೀಶ್

Date:

ಶಿವಮೊಗ್ಗ, “ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲದ ವ್ಯವಸ್ಥೆ ಎಂಬ ವಾಕ್ಯದೊಂದಿಗೆ ಹಾಗೂ “ಹುಟ್ಟಿದ ಮಗುವಿಗೆ ಎದೆಹಾಲು ಕುಡಿಸುವುದರಿಂದ ಅವರ ಮುಂದಿನ ಭವಿಷ್ಯವು ಉಜ್ವಲವಾಗಿರುತ್ತದೆ ” ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಬಗ್ಗೆ ಮಾಹಿತಿ‌ ನೀಡಿದ ಭಾರತೀಯ ಮಕ್ಕಳ ವೈದ್ಯರ ಸಂಘದ ಜಿಲ್ಲಾ ಅಧ್ಯಕ್ಷ ಡಾ | ಬಿ ಎಲ್ ಯತೀಶ್, ಸಮುದಾಯದಲ್ಲಿ ಸ್ತನ್ಯಪಾನದ ಮಹತ್ವದ ಬಗ್ಗೆ ಅರಿವು ಹಾಗು ಅದರ ಬಗೆಗಿನ ತಪ್ಪು ಕಲ್ಪನೆಯನ್ನು ನಿವಾರಿಸುವ ಸಲುವಾಗಿ ವಿವಿಧ ಶಾಲಾ-ಕಾಲೇಜುಗಳು, ಸಾರ್ವಜನಿಕ ಆಸ್ಪತ್ರೆಗಳು ಹಾಗು ಸಾರ್ವಜನಿಕ ಕಛೇರಿಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲರಿಗೂ ಜಾಗೃತಿಯನ್ನು ಮೂಡಿಸಲಾಯಿತು ಎಂದರು.

ತಾಯಿಯ ಹಾಲನ್ನು ಕುಡಿಯುವ ಮಗುವಿಗೆ ಅಗತ್ಯಕ್ಕೆ ಅನುಗುಣವಾಗಿ ಬೇಕಾಗುವ ಸಕಲ ಪೌಷ್ಟಿಕಾಂಶಗಳು ದೊರಕುತ್ತದೆ ಇದರಿಂದ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ ಹಾಗೂ ಮಗುವು ಆರೋಗ್ಯಕರವಾಗಿ ಬೆಳೆಯುವುದಕ್ಕೆ ಸಹಕಾರಿಯಾಗುತ್ತದೆ, ಅದು ಮಾತ್ರವಲ್ಲದೆ ತಾಯಿಗೂ ಅನೇಕ ಆರೋಗ್ಯಕರ ಲಾಭಗಳನ್ನು ಒದಗಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎದೆಹಾಲಿನಲ್ಲಿ ಮಗುವಿಗೆ ಪ್ರೋಬಯಾಟಿಕ್ಸ್ ಅಂಶವು ಲಭಿಸುತ್ತದೆ. ಇದರಿಂದ ಮಗುವಿನ ಜೀಣಾರ್ಂಗ ವ್ಯವಸ್ಥೆಯಲ್ಲಿನ ಸೋಂಕುಗಳನ್ನು ತಡೆದು ಆರೋಗ್ಯಕರವಾಗಿ ಇರಿಸುತ್ತದೆ. ಮಗುವಿಗೆ ಶ್ವಾಸಕೋಶಕ್ಕೆ ಸಂಬಂಧಿಸಿದ ಅನೇಕ ಉಸಿರಾಟದ ತೊಂದರೆಗಳು ಬಾರದಂತೆ ತಡೆಯುತ್ತದೆ ಎಂದರು.

ಎದೆಹಾಲು ಉಣಿಸುವ ಮಗುವಿಗೆ ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್, ದೇಹದಲ್ಲಿ ಅಧಿಕ ಕೊಲೆಸ್ಟಾಲ್ ಕಾಯಿಲೆಗಳು ಇಂತಹ ಕಡಿಮೆಮಾಡುತ್ತದೆ ಹಾಗೂ ಕರುಳಿನ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದರು.

ಇಷ್ಟೆಲ್ಲ ಪ್ರಯೋಜನ ಇರುವ ಸ್ತನ್ಯಪಾನವನ್ನು ಯಾವಾಗ ಬೇಕಾದರೂ ಎಲ್ಲಿ ಬೇಕಾದರೂ ಮಗು ಕೇಳಿದಾಗಲೆಲ್ಲ ನೀಡಲು ನೈಸರ್ಗಿಕವಾಗಿ ಲಭ್ಯವಿರುತ್ತದೆ. ಹಾಗಾಗಿ ಎದೆಹಾಲನ್ನು ಅಮೃತಕ್ಕೂ ಮಿಗಿಲು ಎನ್ನಬಹುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...