ಶಿವಮೊಗ್ಗ | ನೌಕರರ ಮುಷ್ಕರ: ತರಬೇತಿ ಚಾಲಕ, ನಿರ್ವಾಹಕರನ್ನು ಬಳಸಿ ನಗರದಲ್ಲಿ ಬಸ್‌ಗಳ ಓಡಾಟ!

Date:

ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಸಾರಿಗೆ ನಿಗಮಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಮುಷ್ಕರ ಪ್ರಾರಂಭಿಸಿದ್ದಾರೆ.‌ ಇದರಿಂದಾಗಿ ಶಿವಮೊಗ್ಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸುತ್ತಿವೆ.

ಶಿವಮೊಗ್ಗಕ್ಕೆ ಬೇರೆ ಬೇರೆ ಡಿಪೋಗಳಿಂದ ಆಗಮಿಸಿದ ಬಸ್​ಗಳು, ಪ್ರಯಾಣಿಕರನ್ನು ಇಳಿಸಿ ತಮ್ಮ ತಮ್ಮ ಡಿಪೋಗಳಿಗೆ ವಾಪಸ್ ಆಗುತ್ತಿದ್ದವು. ಉಳಿದಂತೆ, ದೂರದೂರುಗಳಿಗೆ ಹೊರಡುವ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯ ಕಂಡುಬಂತು.

ತರಬೇತಿ ಚಾಲಕ, ನಿರ್ವಾಹಕರನ್ನು ಬಳಸಿದ ಅಧಿಕಾರಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಪೋದಲ್ಲಿ ಟ್ರೈನಿ ಡ್ರೈವರ್ಸ್ ಹಾಗೂ ಕಂಡಕ್ಟರ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದಾಗಿ ಸಾಗರ, ಹೊನ್ನಾಳಿ, ಶಿಕಾರಿಪುರ, ಭದ್ರಾವತಿಗೆ ಬಸ್​ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಆದರೆ ಬೆಂಗಳೂರು ಮಾರ್ಗದ ಬಸ್​ಗಳು‌ ಸಿಗದೆ ಪ್ರಯಾಣಿಕರು ಪರದಾಡುವಂತಾಗಿದೆ.

ಪ್ರಯಾಣಿಕರ ಪರದಾಟ ಜಿಲ್ಲೆಯ ಜನರು ಖಾಸಗಿ ಬಸ್‌ಗಳನ್ನು ಹೆಚ್ಚು ಅವಲಂಬಿಸಿದ್ದು, ಎಲ್ಲ ತಾಲೂಕುಗಳಿಗೂ ಬಸ್ ಸೌಲಭ್ಯವಿದೆ. ಶಿವಮೊಗ್ಗದಿಂದ ಹೊರ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು , ಮಂಗಳೂರು, ಉಡುಪಿ, ಚಿಕ್ಕಮಗಳೂರಿಗೂ ಖಾಸಗಿ ಬಸ್​ಗಳು ಸಂಚರಿಸುತ್ತಿವೆ.

ಇದನ್ನು ಓದಿದ್ದೀರಾ? ಕಲಬುರಗಿ | ನೌಕರರ ಮುಷ್ಕರದಿಂದಾಗಿ ಸಾರಿಗೆ ವ್ಯವಸ್ಥೆ ಬಂದ್: ದುಪ್ಪಟ್ಟು ದರ ತೆತ್ತು ಪ್ರಯಾಣಿಸಿದ ಸಾರ್ವಜನಿಕರು!

ಸಾರಿಗೆ ನೌಕರರು ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ‌ ಈಡೇರಿಕೆಗೆ ಪ್ರತಿಭಟನೆ ನಡೆಸುವುದಾಗಿ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದರು. ನಿನ್ನೆ ಸರ್ಕಾರದ ಜೊತೆಗಿನ ಮಾತುಕತೆ ವಿಫಲವಾಗಿದ್ದು ಇಂದು ಪ್ರತಿಭಟನೆ ಕೈಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...