ಶಿವಮೊಗ್ಗ | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್​ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ ಜನ

Date:

ಶಿವಮೊಗ್ಗ,ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ.

ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ ಪಲ್ಟಿಯಾಗಿದೆ. ಇದರಿಂದ ಸುಮಾರು 700ಕ್ಕೂ ಹೆಚ್ಚು ಕೋಳಿಗಳು ರಸ್ತೆಯಲ್ಲಿಯೇ ಅಫಾತಕ್ಕೀಡಾಗಿ ಸಾವನ್ನಪ್ಪಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ.

ಪುಕ್ಸಟ್ಟೆ ಕೋಳಿಗಾಗಿ ಮುಗಿಬಿದ್ದ ಜನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಂಟರ್‌ ಲಾರಿಯಿಂದ ರಸ್ತೆಗೆ ಬಿದ್ದಿದ್ದ ನೂರಾರು ಕೋಳಿಗಳು ಒದ್ದಾಡುತ್ತಿದ್ದರೆ, ಇನ್ನೂ ಕೆಲವು ಕೋಳಿಗಳು ಸಾವನ್ನಪ್ಪಿದ್ದವು. ರಸ್ತೆಯಲ್ಲಿ ಬಿದ್ದಿದ್ದ ಕೋಳಿಯನ್ನು ದಾರಿಯಲ್ಲಿ ಹೋಗುವವರು ತಮ್ಮ ವಾಹನವನ್ನು ರಸ್ತೆಯಲ್ಲಿಯೇ ಬಿಟ್ಟು ನನಗೊಂದು, ನಮ್ಮ‌ ಮನೆಗೊಂದು ಎಂಬಂತೆ ಕೋಳಿಗಳನ್ನು ಹಿಡಿದು ತೆಗೆದುಕೊಂಡು ಹೋಗುತ್ತಿದ್ದರು.

ಆದರೆ ಕ್ಯಾಂಟರ್ ಚಾಲಕ ಮೂಕ ಪ್ರೇಕ್ಷಕನಾಗಿ ನಿಂತು ನೋಡುತ್ತಿದ್ದರು. ಸದ್ಯ ಕ್ಯಾಂಟರ್ ಅನ್ನು ರಸ್ತೆಯಿಂದ ತೆರವು ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಆನಂದಪುರಂ ಪೊಲೀಸರು ಸಂಚಾರ ಮುಕ್ತಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...