ಶಿವಮೊಗ್ಗ | ಮುಜರಾಯಿ ದೇವಾಲಯಗಳಲ್ಲಿ ಸಿಸಿ ಕ್ಯಾಮೆರಾ, ನಾಮಫಲಕ ಕಡ್ಡಾಯ: ಡಿಸಿ

Date:

ಮುಜರಾಯಿ ಇಲಾಖೆಗೆ ಒಳಪಟ್ಟ ಜಿಲ್ಲೆಯ ದೇವಾಲಯಗಳಲ್ಲಿ ಕಡ್ಡಾಯವಾಗಿ ʼಧಾರ್ಮಿಕ ದತ್ತಿ ಇಲಾಖೆ, ಮುಜರಾಯಿ ದೇವಸ್ಥಾನ, ಕರ್ನಾಟಕ ಸರ್ಕಾರʼ ಎಂಬ ನಾಮಫಲಕ ಹಾಗೂ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ತಹಶೀಲ್ದಾರ್‌ಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಸೂಚನೆ ನೀಡಿದರು.

ಮುಜರಾಯಿ ದೇವಸ್ಥಾನಗಳಲ್ಲಿ ವ್ಯವಸ್ಥಾಪಕ ಸಮಿತಿ ರಚನೆ, ಅರ್ಚಕರ ನೇಮಕಾತಿ ಹಾಗೂ ಜೀರ್ಣೋದ್ಧಾರದ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಶಿವಮೊಗ್ಗದ ಭದ್ರಾವತಿಯ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ನಡೆದ ವೈಕುಂಠ ಏಕಾದಶಿಯಲ್ಲಿ ನಡೆದಿದೆ ಎನ್ನಲಾದ ಹಣ ದುರುಪಯೋಗದ ಕುರಿತು ಕೂಡಲೇ ವರದಿ ಸಲ್ಲಿಸಬೇಕು. ಸೊರಬದ ಚಂದ್ರಗುತ್ತಿಯ ರೇಣುಕಾಂಬ ದೇವಾಲಯದ ಇಒ, ದೇವಾಲಯಕ್ಕೆ ಬಂದಿದ್ದ ಹರಕೆ ಸೀರೆಗಳನ್ನು ಮನಬಂದಂತೆ ಹಂಚಿಕೆ ಮಾಡಿರುವುದು ಹಾಗೂ ಅಕ್ಕಿ, ಎಣ್ಣೆ ಸೇರಿದಂತೆ ಇತರೆ ವಸ್ತುಗಳ ಬಗ್ಗೆ ಸರಿಯಾದ ನಿರ್ವಹಣೆ ಇಲ್ಲದಿರುವುದು, ದೇವಾಲಯಕ್ಕೆ ಬಂದ ಭಕ್ತರೊಂದಿಗೆ ಒರಟಾಗಿ ವರ್ತಿಸುತ್ತಾರೆ ಎಂಬ ಆರೋಪದ ಕುರಿತು ಸಮಗ್ರ ವಿವರ ನೀಡಬೇಕು” ಎಂದು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಇದನ್ನು ಓದಿ: ಶಿವಮೊಗ್ಗ | ರೈತನಿಗೆ ಪರಿಹಾರ ಪಾವತಿಯಲ್ಲಿ ವಿಳಂಬ; ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಧಾರ್ಮಿಕ ಪರಿಷತ್‌ ಸದಸ್ಯರೂ ಆದ ನಿವೃತ್ತ ನ್ಯಾ.ಸಿ ಸೆಲ್ವಕುಮಾರ್‌, ವಿದುಶಿ ಗೀತಾ ದಾತಾರ್‌, ಎಂ ಶಿವಲಿಂಗಪ್ಪ, ವರಲಕ್ಷ್ಮೀ‌, ಎನ್ ಉಮಾಪತಿ, ಎಸ್‌ ಡಿ ಪ್ರವೀಣ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...