ಶಿವಮೊಗ್ಗ | ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ; ನಿರುದ್ಯೋಗ ದಿನಾಚರಣೆಯಾಗಿ ಆಚರಿಸಿದ ಕಾಂಗ್ರೆಸ್

Date:

ಶಿವಮೊಗ್ಗ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ವಿನೂತನವಾಗಿ ಆಚರಣೆ ಮಾಡಿದ ಜಿಲ್ಲಾ ಕಾಂಗ್ರೆಸ್.

ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದುರು.

1002251902

ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ ಕುಮಾರ್ ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿ ಕೇಂದ್ರದಲ್ಲಿ ಮೂರು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿ ಮುಗಿಸಿ ಮೂರನೇ ಅವಧಿಯ ವರ್ಷದ ಸಂಭ್ರಮಾಚರಣೆ ಆಚರಿಸಿದರೂ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡದೇ ದೇಶದಲ್ಲಿ ನಿರುದ್ಯೋಗ ತಾಂಡವವಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಇದನ್ನು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಲಿಲ್ಲ.

ಬದಲಿಗೆ ಈ ಹಿಂದಿನಿಂದ ಕಾಂಗ್ರೆಸ್ ಬೆಳೆಸಿ, ಪೋಷಿಸಿದ್ದ ಸರ್ಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆಗಳನ್ನು ಮುಚ್ಚಿ ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬೀಳುವಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು .

ಇದೇ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಸಿ ಯೋಗೇಶ್ ರವರು ಮಾತನಾಡಿ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಮೂಲಕ ಉದ್ಯೋಗ ಕಡಿತ ಮಾಡುತ್ತಾ ಬರಲಾಯಿತು.

ಉದ್ಯೋಗ ಸೃಷ್ಟಿಯ ಬಗ್ಗೆ ಸರ್ಕಾರವನ್ನು ಕೇಳಿದ ಯುವ ಜನತೆಗೆ ‘ಬೋಂಡ ಮಾರಿ, ತರಕಾರಿ ಮಾರಿ, ಚಹಾ ಮಾರಿ ಜೀವನ ನಡೆಸಿ’ ಎಂದು ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿ ಸಲಹೆ ನೀಡಿ ತಮ್ಮ ಬೇಜವಾಬ್ದಾರಿತನ ಪ್ರದರ್ಶಿಸಿದ್ದರು.

1002251780

ಈಗ ಮೂರನೇ ಬಾರಿ ಪ್ರಧಾನಿಯಾಗಿ ತಮ್ಮ ಹುಟ್ಟುಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದಾಗಿ ಯುವಜನತೆ ಕಂಗಾಲಾಗಿದ್ದಾರೆ. ಉನ್ನತ ವ್ಯಾಸಂಗ ಮಾಡಿದವರು ದಿನಗೂಲಿ ಕೆಲಸವೂ ಸಿಗದೆ ಪರದಾಡುತ್ತಿದ್ದಾರೆ ಎಂದು ದೂರಿದರು .

ಯುವ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಮಾತನಾಡಿ ಮೇಕ್ ಇನ್ ಇಂಡಿಯಾ ಮಂತ್ರ ಜಪಿಸುತ್ತಲೇ ಪ್ರಧಾನಿ ಮೋದಿಯವರು ದೇಶದ ವಿದ್ಯಾವಂತ ಯುವಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡಿ ಅವರ ಬದುಕನ್ನು ದುಸ್ತರ ಮಾಡಿದ್ದಾರೆ.

ಆದ್ದರಿಂದ ಈ ದಿನ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನವನ್ನು ನಿರುದ್ಯೋಗಿ ಯುವಜನತೆ ಬಸ್ ಸ್ಟ್ಯಾಂಡ್‍ನಲ್ಲಿ ಬೂಟ್ ಪಾಲೀಶ್ ಮಾಡುವ ಮೂಲಕ, ಬೋಂಡ, ತರಕಾರಿ, ಚಹಾ ಮಾರುವ ಮೂಲಕ ಆಚರಿಸುತ್ತಿದ್ದು, ದೇಶದ ನಿರುದ್ಯೋಗಿ ಯುವಕರ ಬದುಕನ್ನು ಸರ್ಕಾರಕ್ಕೆ ತೋರಿಸಿಕೊಡುತ್ತಿದ್ದೇವೆ.

ಗೌರವಾನ್ವಿತ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲು ನಿರ್ದೇಶನ ಕೊಡಬೇಕು. ಇಲ್ಲವೇ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಮಧುಸೂದನ್, ಚೇತನ್ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್, ಬ್ಲಾಕ್ ಅಧ್ಯಕ್ಷರಾದ ಗಿರೀಶ್, ಪ್ರವೀಣ, ಶಶಿಕುಮಾರ್, ಸಕ್ಲೇನ್, ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಮಲಗುಪ್ಪ ಶಿವು, ಆಕಾಶ್, ತೌಪಿಕ್, ರೇಷ್ಮಾ, NSUI ರಾಜ್ಯ ಕಾರ್ಯದರ್ಶಿ ಬಾಲಾಜಿ ಜಿಲ್ಲಾಧ್ಯಕ್ಷ ವಿಜಯ್ , ಜಿಲ್ಲಾ ಕಾರ್ಯಧ್ಯಕ್ಷ ರವಿಕಟಿಕೆರೆ, ನಗರ ಅಧ್ಯಕ್ಷರ ರವಿ, ಸುಭಾನ್, ಚಂದ್ರ ಜಿ ರಾವ್, ವರುಣ್ ವಿ ಪಂಡಿತ್, ಆದಿತ್ಯ, ನಂದೀಶ್, ಶ್ರೀಕಾಂತ ಹಾಗೂ ಸಾಕಷ್ಟು ಯುವಕರು ಆಕ್ರೋಶ ವ್ಯಕ್ತಪಡಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...