ಶಿವಮೊಗ್ಗ | ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್ ಮಾತನಾಡಿ, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಮೇಲೆ ತೆರಿಗೆಯ ಅಧಿಕ ಹೊರೆ ಹೊರಿಸುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಜೀವನ ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಮಾತನಾಡಿ, “ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ಉದ್ಯೋಗ ಸೃಷ್ಟಿ ಮಾಡುವುದನ್ನಾಗಲೀ, ಜನಸಾಮಾನ್ಯರ ಜೀವನ ಸರಳಗೊಳಿಸುವ ಕೆಲಸವನ್ನಾಗಲೀ ಮಾಡುತ್ತಿಲ್ಲ. ಬದಲಿಗೆ ಜನರಿಂದ ಮಿತಿಮೀರಿ ತೆರಿಗೆ ವಸೂಲು ಮಾಡುವ ಮೂಲಕ ಜನರನ್ನು ಸುಲಿಗೆ ಮಾಡಲು ಹೊರಟಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001452318

ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಮಾತನಾಡಿ, “ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು. ಇಲ್ಲವೇ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಬೇಕೆಂದು” ಆಗ್ರಹಿಸಿದರು.

ಇದನ್ನೂ ಓದಿ: ಶಿವಮೊಗ್ಗ | ಕಲಾ ವಿಭಾಗದಲ್ಲಿ ನಿಬಾ ಅಹಮದಿಗೆ ಡಿಸ್ಟಿಂಕ್ಷನ್

ಪ್ರತಿಭಟನೆಯಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ವಿಜಯ ಕುಮಾರ್, ಕಾನೂನು ಸಲಹೆಗಾರ ಪೂರ್ಣೇಶ್, ಯುವ ಕಾಂಗ್ರೆಸ್‌ ವಿಧಾನ ಸಭಾ ಅಧ್ಯಕ್ಷ ಚರಣ್, ಪ್ರವೀಣ್, ಗಿರೀಶ್, ಸಕ್ಲೇನ್, ಪ್ರವೀಣ್, ಶಶಿಕುಮಾರ್, ಅಬ್ದುಲ್, ಸತ್ತರ್, ಮಲವಗೊಪ್ಪ ಶಿವು, ಆಕಾಶ್, ಅಶೋಕ್, ಕಾಶಿಫ್ ಬಾಲಾಜಿ, ಧನರಾಜ, ನಿಖಿಲ್ ಎಸ್ ಸಿ, ವಿಷ್ಣು ಕುಮಾರ್, ಅಕ್ಬರ್ ತೌಸೀಫ್ ಹಾಗೂ ನೂರಾರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...