ಶಿವಮೊಗ್ಗ | ನಕಲು ಅಂಕಪಟ್ಟಿ ನೀಡಿ ಹುದ್ದೆಗೆ ಆಯ್ಕೆಯಾಗಿದ್ದ ಇಬ್ಬರಿಗೆ ಶಿಕ್ಷೆ ವಿಧಿಸಿದ ಕೋರ್ಟ್

Date:

ಶಿವಮೊಗ್ಗ ಎಸ್ಎಸ್ಎಲ್‌ಸಿ ಜೆರಾಕ್ಸ್ ಅಂಕಪಟ್ಟಿ ನೀಡಿ ಮೆಸ್ಕಾಂ ಕೆಲಸಕ್ಕೆ ಸೇರ್ಪಡೆಯಾಗಿದ್ದ ಇಬ್ಬರಿಗೆ, ಶಿವಮೊಗ್ಗದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕು ಆರುಂಡಿ ಗ್ರಾಮದ ನಿವಾಸಿ ಗಣೇಶಗೌಡ ಬಿ ಜಿ (23) ಹಾಗೂ ತಾಲೂಕಿನ ಕಂದಗಲ್ ಗ್ರಾಮದ ನಿವಾಸಿ ಬಿ ಬಿ ಗಿರೀಶ್ (27) ಜೈಲು ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ.

ಕಲಂ 420 ಸಹಿತ 34 ಐಪಿಸಿ ಗೆ 2 ವರ್ಷ ಸಜೆ 4000 ರೂ ದಂಡ, ಕಲಂ 465 ಐಪಿಸಿ ಗೆ 6 ತಿಂಗಳು ಸಜೆ ಹಾಗೂ ಕಲಂ 468 ಸಹಿತ 34 ಐಪಿಸಿಗೆ 2 ವರ್ಷ ಸಜೆ ಹಾಗೂ 4000 ರೂ. ದಂಡ ಮತ್ತು ಕಲಂ 471 ಸಹಿತ 34 ಐಪಿಸಿಗೆ 6 ತಿಂಗಳ ಕಾಲ ಸಜೆ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.ನ್ಯಾಯಾಧೀಶರಾದ ಶಿವಕುಮಾರ್ ಜಿ ಎನ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರುಗಳಾದ ಕಿರಣ್ ಕುಮಾರ್ ಹಾಗೂ ರಂಜಿತ್ ಕುಮಾರ್ ಅವರು ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: Video Thumbnail: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುತ್ತಿದೆ ಶಿವಮೊಗ್ಗದ ಈ ಸರ್ಕಾರಿ ಶಾಲೆ | School | Shivamogga

ಶಿಕ್ಷೆಗೊಳಗಾಗಿರುವ ಗಣೇಶಗೌಡ ಹಾಗೂ ಗಿರೀಶ್ ಅವರು, 2016ರ ನವೆಂಬರ್‌ 24ರಂದು ಮೆಸ್ಕಾಂ ಹುದ್ದೆಗೆ ಎಸ್ಎಸ್ಎಲ್‌ಸಿಯ ಅಸಲಿ ಅಂಕಪಟ್ಟಿಗೆ ಬದಲಾಗಿ, ಜೆರಾಕ್ಸ್ ಅಂಕಪಟ್ಟಿ ನೀಡಿ ಸೇರ್ಪಡೆಯಾಗಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಪಿಎಸ್ಐ ಆಗಿದ್ದ ಇಮ್ರಾನ್ ಬೇಗ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...