ಶಿವಮೊಗ್ಗ | ಮಾಜಿ ಸಿಎಂ ಬಂಗಾರಪ್ಪ ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ನಿರ್ಧಾರ

Date:

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅಧಿಕಾರದ ಆಸೆಗಾಗಿ ಯಾವುದೇ ಪಕ್ಷಕ್ಕೆ ಸೀಮಿತರಾಗದೇ ಜಾತಿ, ಮತ, ಧರ್ಮಗಳನ್ನು ಮೀರಿದ ಸಮಾನತೆಯನ್ನು ಮೈಗೂಡಿಸಿಕೊಂಡಿದ್ದರು. ಹಾಗಾಗಿ ಅವರ ಹೆಸರು ಎಂದಿಗೂ ಅಜರಾಮರ ಎಂದು ತಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಗಣಪತಿ ಹೇಳಿದರು.

ಶನಿವಾರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹುಟ್ಟುಹಬ್ಬದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ 35 ವರ್ಷಗಳು ಕಳೆದಿವೆ. ಆದರೆ ಅವರು ರೂಪಿಸಿದ ಅಕ್ಷಯ, ಆರಾಧನಾ, ಆಶ್ರಯ, ಗ್ರಾಮೀಣ ಕೃಪಾಂಕ, ಉಚಿತ ವಿದ್ಯುತ್ ಮೊದಲಾದ ಜನೋಪಯೋಗಿ ಯೋಜನೆಗಳು ಇಂದಿಗೂ ಪ್ರಸ್ತುತವಾಗಿ ಚಿರಸ್ಥಾಯಿಯಾಗಿ ಉಳಿದಿವೆ.

ಕೇವಲ ಮತ ಬ್ಯಾಂಕ್‌ಗಾಗಿ ಎಂದೂ ಆಡಳಿತ ಮಾಡದ ಬಂಗಾರಪ್ಪನವರು ಹಿಂದುಳಿದ ಸಮುದಾಯಗಳು ಆರಾಧಿಸುವ ದೇವರ ದೇಗುಲಗಳ ಅಭಿವೃದ್ಧಿಯನ್ನೂ ಮಾಡಿದ್ದಾರೆ ಎಂದ ಅವರು, ಅ. 26ರಂದು ಅವರ ಹುಟ್ಟುಹಬ್ಬವನ್ನು ಸಚಿವ ಮಧು ಬಂಗಾರಪ್ಪ ಅವರ ಮುಖಂಡತ್ವದಲ್ಲಿ ಪ್ರತೀ ವರ್ಷ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅ. ೨೬ರಂದು ಪಟ್ಟಣದ ಬಂಗಾರಧಾಮದಲ್ಲಿ ಎಸ್. ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್ ಮೊದಲಾದವರು ಭಾಗವಹಿಸುವರು.

ಈ ಸಂದರ್ಭದಲ್ಲಿ ಸಾಹಿತಿ ಕಾಳೇಗೌಡ ನಾಗವಾರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಗುವುದು. ಅಲ್ಲದೇ ಆಳ್ವಾಸ್ ನುಡಿಸಿರಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ. ತಾಲ್ಲೂಕಿನಾದ್ಯಂತ ಸುಮಾರು 1೦ ಸಾವಿರದಷ್ಟು ಬಂಗಾರಪ್ಪ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಜಿ.ಪಂ. ಮಾಜಿ ಸದಸ್ಯ ತಬಲಿ ಬಂಗಾರಪ್ಪ ಮಾತನಾಡಿದರು.ಸಭೆಯಲ್ಲಿ ತಾಲೂಕು ಬಹರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಯುವ ಘಟಕದ ಅಧ್ಯಕ್ಷ ಪ್ರವೀಣ್‌ಕುಮಾರ್ ಶಾಂತಗೆರೆ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಮುಖಂಡರಾದ ನಾಗರಾಜ ಚಿಕ್ಕಸವಿ, ಕಲ್ಲಂಬಿ ಹಿರಿಯಣ್ಣ, ಪ್ರಕಾಶ್ ಹಳೆಸೊರಬ, ಶ್ರೀಕಾಂತ್ ಚಿಕ್ಕಶಕುನ, ಪ್ರಶಾಂತ್ ಮೇಸ್ತಿç, ಸುನಿಲ್‌ಗೌಡ್ರು, ಪರಶುರಾಮ ಸಣ್ಣಬೈಲ್, ನಾಗರಾಜ ಚಂದ್ರಗುತ್ತಿ, ರಶೀದ್ ಸಾಬ್, ನಾಗಪ್ಪ ಮಾಸ್ತರ್, ಪ್ರಭಾಕರ ಶಿಗ್ಗಾ, ಫಯಾಜ್ ಅಹ್ಮದ್, ಬಸವೇಶ್ವರ, ಕೆ.ಪಿ. ರಾಜೇಶ್, ಸೇವಾದಳದ ಶಿವಣ್ಣ ಮೊದಲಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...